ಕುಂದಾಪುರ (ಮಾ,22): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ ಕಾಲೇಜು ಮಟ್ಟದ ಸಾಂಪ್ರದಾಯಿಕ ಕ್ರೀಡೆಗಳ ಸಮಾರೋಪ ಸಮಾರಂಭ ಮಾರ್ಚ್ 19ರಂದು ನಡೆಯಿತು. ಕಾರ್ಯಕ್ರಮದಲ್ಲಿ ಬ್ರಹ್ಮಾವರದ ಎಸ್.ಎಮ್.ಎಸ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ವೆಂಕಟೇಶ್ ಭಟ್, ಕುಂದಾಪುರದ ಭಂಡಾರ್ಕಾರ್ ಆರ್ಟ್ಸ್ ಎಂಡ್ ಸಾಯನ್ಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಶಂಕರನಾರಾಯಣ, ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಶ್ರೀ ಶ್ರೀಕಾಂತ್ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಇನ್ಫೋಸಿಸ್ ಕಂಪೆನಿ ಉದ್ಯೋಗಿ ಮತ್ತು ಪೂರ್ವ ವಿದ್ಯಾರ್ಥಿ ಶಿವಪ್ರಸಾದ್ ವಕ್ವಾಡಿ, ಕುಂದಾಪುರದ ಭಂಡಾರ್ ಕಾರ್ ಆರ್ಟ್ಸ್ ಎಂಡ್ ಸಾಯನ್ಸ್ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಸಹ ನಿರ್ದೇಶಕಿ ವನಿತಾ,ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ರಂಜಿತ್ ಟಿ.ಎನ್ ,ವಾಣಿಜ್ಯ ಶಾಸ್ತ್ರ ಉಪನ್ಯಾಸಕರುಗಳಾದ ಶ್ರೀ ರಾಜೇಶ್ ಶೆಟ್ಟಿ ವಕ್ವಾಡಿ, ಶ್ರೀ ಶಿವರಾಜ್ ಸಿ. ನಾವುಂದ, ಕ್ರೀಡಾ ಸಂಘದ ಕಾರ್ಯದರ್ಶಿಯಾದ ಲಕ್ಷ್ಮೀಶ ಮಂಜ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸುಪ್ರೀತಾ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.














