ಕುಂದಾಪುರ (ಮಾ, 25) : ರಾಷ್ಟ್ರೀಯ ಶಿಕ್ಷಣ ನೀತಿಯೇ ತಿಳಿಸಿರುವಂತೆ ಪದವಿಯ ಸಂದರ್ಭದಲ್ಲಿ ಸಂಶೋಧನೆಗೆ ಹೆಚ್ಚು ಒತ್ತು ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗಿಂತ ಮೊದಲು ಉಪನ್ಯಾಸಕರು ಹೆಚ್ಚು ಸಂಶೋಧನೆಯಲ್ಲಿ ತೊಡಗುವಂತಾಗಬೇಕು. ಸಂಶೋಧನಾತ್ಮಕ ಲೇಖನಗಳನ್ನು ಹೇಗೆ ಮತ್ತು ಎಲ್ಲಿ ಪ್ರಕಟಿಸಬೇಕು ಎನ್ನುವುದನ್ನು ಉಜಿರೆಯ ಎಸ್.ಡಿ.ಎಮ್. ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ|.ನಾಗೇಂದ್ರ ಎಸ್ ತಿಳಿಸಿಕೊಟ್ಟರು.
ಅವರು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಮಾರ್ಚ್ 24ರಂದು ನಡೆದ “ಪ್ರಾಧ್ಯಾಪಕರ ಅಭಿವೃದ್ಧಿ ಕಾಯಕ್ರಮ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ಐ.ಕ್ಯೂ.ಎ.ಸಿ. ಸಂಯೋಜಕಿ ಶ್ರೀಮತಿ ಅವಿತಾ ಕೊರೆಯಾ ಅತಿಥಿಗಳನ್ನು ಪರಿಚಯಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಸುಧಾಕರ್ ಪಾರಂಪಳ್ಳಿ ನಿರೂಪಿಸಿದರು.