ಕುಂದಾಪುರ (ಮಾ. 31): ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ, ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಮತ್ತು ದೂರದರ್ಶನ ಕೇಂದ್ರ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ 2019- 20 ನೇ ಸಾಲಿನ ರಾಜ್ಯಮಟ್ಟದ ಸರ್. ಸಿ. ವಿ. ರಾಮನ್ ವಿಜ್ಞಾನ ರಸಪ್ರಶ್ನೆ “ಥಟ್ ಅಂತ ಹೇಳಿ” ಸ್ಪರ್ಧೆಯಲ್ಲಿ ಪ್ರಜ್ಞಾನ್. ಪಿ. ಶೆಟ್ಟಿ ಮತ್ತು ಅನಿಕೇತ್ ಆರ್. ಇವರು ಲಿಟಲ್ ರಾಕ್ ಇಂಡಿಯನ್ ಶಾಲೆ, ಬ್ರಹ್ಮಾವರ, ಉಡುಪಿ ಜಿಲ್ಲೆಯಿಂದ ಭಾಗವಹಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುತ್ತಾರೆ.
ಮಾರ್ಚ್ 27 , 28, ಮತ್ತು 29 ರಂದು ಈ ಸ್ಪರ್ಧೆ ಬೆಂಗಳೂರಿನಲ್ಲಿ ನಡೆದಿತ್ತು. ಶಿಕ್ಷಕ ಶ್ರೀ ಪ್ರಸನ್ನ ಕುಮಾರ್ ಶೆಟ್ಟಿ ಈ ವಿದ್ಯಾರ್ಥಿಗಳನ್ನು ಸ್ಪರ್ಧೆಗೆ ಸಜ್ಜುಗೊಳಿಸಿ, ಮಾರ್ಗದರ್ಶನ ನೀಡಿರುತ್ತಾರೆ.