ಹೆಮ್ಮಾಡಿ (ಎ. 4): ಏಪ್ರಿಲ್ 27ರಂದು ನಡೆಯಲಿರುವ ಪುರಾಣ ಪ್ರಸಿದ್ದ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಿಯ ಬ್ರಹ್ಮ ರಥೋತ್ಸವದ ಪೂರ್ವ ತಯಾರಿ ಹಾಗೂ ಬಗ್ವಾಡಿ ಹೋಬಳಿ ವ್ಯಾಪ್ತಿಯ ಗುರಿಕಾರರ ಸಭೆ ಮತ್ತು ಸನ್ಮಾನ ಕಾರ್ಯಕ್ರಮ ಏಪ್ರಿಲ್ 4 ರ ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಮಹಿಷಾಸುರ ಮರ್ದಿನಿ ಸಭಾಭವನದಲ್ಲಿ ನಡೆಯಿತು.ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ(ರಿ) ಉಚ್ಚಿಲ ಇದರ ಅಧ್ಯಕ್ಷರಾದ ಜಯ.ಸಿ ಕೋಟ್ಯಾನ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೊಗವೀರ ಮಹಾಜನ ಸೇವಾ ಸಂಘ( ಬಗ್ವಾಡಿ ಹೋಬಳಿ1941) ಇದರ ಕುಂದಾಪುರ ಶಾಖಾಧ್ಯಕ್ಷರಾದ ಕೆ.ಕೆ ಕಾಂಚನ್ ರವರು ಸಭೆಯ ಅಧ್ಯಕ್ಷತೆಯನ್ನುವಹಿಸಿದ್ದರು.
ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ1941) ಕುಂದಾಪುರ ಶಾಖೆಯ ಮಾಜಿ ಅಧ್ಯಕ್ಷರುಗಳಾದ ಶ್ರೀ ಹಿರಿಯಣ್ಣ, ಎಂ.ಎಂ ಸುವರ್ಣ,ಉಪಾಧ್ಯಕ್ಷರಾದ ಶ್ರೀ ಪುಂಡಲೀಕ ಬಂಗೇರ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶ್ರೀ ಶಿವರಾಮ ಕೋಟ, ಕುಂದಾಪುರ ಪುರಸಭೆಯ ಅಧ್ಯಕ್ಷರಾದ ಶ್ರೀಮತಿ ವೀಣಾ ಭಾಸ್ಕರ್ ಮೆಂಡನ್, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶ್ರೀಮತಿ ರತ್ನಾ ರಮೇಶ್ ವಿ.ಕುಂದರ್ ಹಾಗೂ ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ ಇದರ ವಿವಿಧ ಶಾಖೆಗಳ ಅಧ್ಯಕ್ಷರುಗಳು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಗುರಿಕಾರರ ಸಭೆಯಲ್ಲಿ ಗುರಿಕಾರರನ್ನು ಗೌರವಿಸಿ ಸನ್ಮಾನಿಸಲಾಯಿತು. ಶ್ರೀ ಗಣಪತಿ. ಟಿ. ಶ್ರೀಯಾನ್ ಗುರಿಕಾರರ ನೆಲೆಯಲ್ಲಿ ಅನಿಸಿಕೆಯ ಮಾತುಗಳನ್ನಾಡಿದರು. ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಹಾಗೂ ಪುರಸಭಾ ಚುನಾವಣೆಯಲ್ಲಿ ಚುನಾಯಿತರಾದ ಮೊಗವೀರ ಸಮುದಾಯದ ಬಗ್ವಾಡಿ ಹೋಬಳಿ ವ್ಯಾಪ್ತಿಯ ಗ್ರಾಮ ಪಂಚಾಯತ್ ಹಾಗೂ ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳನ್ನು ಸಭೆಯಲ್ಲಿ ಸನ್ಮಾನಿಸಲಾಯಿತು.
ಹಾಗೆಯೇ ಯಕ್ಷಗುರು ಶ್ರೀ ಪ್ರಸಾದ್ ಕುಮಾರ ಮೊಗೆಬೆಟ್ಟು ಹಾಗೂ ಕರ್ನಾಟಕ ಕರಾವಳಿಯ ಮೀನುಗಾರರ ಕ್ರಿಯಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಜಯ.ಸಿ .ಕೋಟ್ಯಾನ್ ಹಾಗೂ ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶ್ರೀ ಶಿವರಾಮ ಕೋಟ ರವರನ್ನು
ಸಭೆಯಲ್ಲಿ ಸನ್ಮಾನಿಸಲಾಯಿತು.
ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ1941) ಕುಂದಾಪುರ ಶಾಖೆಯ ಜೊತೆ ಕಾರ್ಯದರ್ಶಿ ಶ್ರೀ ರಾಜು ಶ್ರೀಯಾನ್ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀ ಸುರೇಶ ವಿಠ್ಠಲವಾಡಿ ಸಂಘದ 2019 ರ ವಾರ್ಷಿಕ ವರದಿಯನ್ನು ವಾಚಿಸಿದರು. ಸದಸ್ಯರಾದ ಶ್ರೀ ರಾಘವೇಂದ್ರ ನೆಂಪು ವಂದಿಸಿದರು.
ಸದಸ್ಯರಾದ ಸುಧಾಕರ್ ಕಾಂಚನ್ ಸನ್ಮಾನಿತರನ್ನು ಸಭೆಗೆ ಪರಿಚಯಿಸಿದರು ಹಾಗೂ ಮೊಗವೀರ ಯುವ ಸಂಘಟನೆ (ರಿ)ಉಡುಪಿ ಜಿಲ್ಲೆ ಇದರ ಕೋಶಾಧಿಕಾರಿ ಪಾಂಡುರಂಗ ಬೈಂದೂರು ಕಾರ್ಯಕ್ರಮವನ್ನು ನಿರೂಪಿಸಿದರು.