ಕೋಟೇಶ್ವರ (ಎ. 4): ಕೋಟೇಶ್ವರ ಸಮೀಪದ ಗೋಪಾಡಿ ಕಡಲತೀರದಲ್ಲಿ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ವತಿಯಿಂದ 90 ನೇ ವಾರದ ಸ್ವಚ್ಛತಾ ಕಾರ್ಯಕ್ರಮ ಎಪ್ರಿಲ್ 04 ರಂದು ಜರುಗಿತು. ನಿರಂತರವಾಗಿ ಸ್ವಚ್ಛತಾ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ಕಾರ್ಯಕರ್ತರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು 20 ಚೀಲಗಳಷ್ಟು ತ್ಯಾಜ್ಯಗಳನ್ನು ಸಂಗ್ರಹಿಸಿ ಸಮರ್ಪಕ ವಿಲೇವಾರಿಗೆ ವ್ಯವಸ್ಥೆ ಮಾಡಿದರು.
ನಿರಂತರವಾಗಿ ಕುಂದಾಪುರ ಕೋಡಿ ,ಬೀಜಾಡಿ ಹಾಗೂ ಗೋಪಾಡಿ ಕಡಲತೀರದಲ್ಲಿ ಸ್ವಚ್ಛತಾ ಅಭಿಯಾನ, ಕಡಲಾಮೆ ಮೊಟ್ಟೆ ರಕ್ಷಣೆ ಜೀವವೈವಿಧ್ಯತೆ ಕುರಿತು ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ನವರು ನಡೆಸಿಕೊಂಡು ಬರುತ್ತಿದ್ದಾರೆ.