ಹಾಲಾಡಿ (ಎ, 4): ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ ಉಡುಪಿ ಹಾಗೂ ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಜರುಗಲಿರುವ ಮೊಗವೀರ ಸಮುದಾಯದ 25 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಹಾಲಾಡಿಯ ಶಾಲಿನಿ ಜಿ.ಶಂಕರ್ ಕನ್ವೆನ್ಷನ್ ಸೆಂಟರ್ ನಲ್ಲಿ ಮೇ 02 ರಂದು ನಡೆಯಲಿದೆ ಎಂದು ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶಿವರಾಮ ಕೋಟ ಹೇಳಿದರು.
ನಾಡೋಜ ಡಾ.ಜಿ ಶಂಕರ್ ರವರ ಸಲಹೆ ಮೇರೆಗೆ ಹಾಲಾಡಿಯ ಶಾಲಿನಿ ಜಿ.ಶಂಕರ್ ಕನ್ವೆನ್ಷನ್ ಸೆಂಟರ್ ನಲ್ಲಿ ಎಪ್ರಿಲ್ 04 ರಂದು ಆಯೋಜಿಸಿದ್ದ ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ಇದರ ಜಿಲ್ಲಾ ಪದಾಧಿಕಾರಿಗಳ ಮತ್ತು ಘಟಕಾಧ್ಯಕ್ಷರ ವಿಶೇಷ ಸಭೆಯಲ್ಲಿ ಅವರು ಸಭೆಯಲ್ಲಿ ತಿಳಿಸಿದರು.
ಇದೇ ಎಪ್ರಿಲ್ 08 ರಂದು ಸಾಮೂಹಿಕ ವಿವಾಹ ಪೂರ್ವ ನಡೆಯಲಿರುವ ವೀಳ್ಯಶಾಸ್ತ್ರ ಕಾರ್ಯಕ್ರಮದ ಪೂರ್ವತಯಾರಿ ಕುರಿತು ಹಾಗೂ ಮೇ 02 ರಂದು ನಡೆಯಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಿದ್ದತೆ ಹಾಗೂ ಸದಸ್ಯತ್ವ ಅಭಿಯಾನದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶಿವರಾಮ ಕೋಟ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಘದ ನಿಕಟಪೂರ್ವ ಅಧ್ಯಕ್ಷ ವಿನಯ ಕರ್ಕೇರ ಹಾಗೂ ಮಾಜಿ ಅಧ್ಯಕ್ಷರುಗಳಾದ ಗಣೇಶ ಕಾಂಚನ್, ಸತೀಶ್ ಎಮ್.ನಾಯ್ಕ್, ಎಮ್.ಎಸ್. ಸಂಜೀವ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಹಿರಿಯಡ್ಕ ಹಾಗೂ ಕೋಶಾಧಿಕಾರಿ ಪಾಂಡುರಂಗ ಬೈಂದೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ರಾಜೇಂದ್ರ ಹಿರಿಯಡ್ಕ ಕಾರ್ಯಕ್ರಮವನ್ನು ನಿರೂಪಿಸಿದರು.