ಹೆಮ್ಮಾಡಿ (ಎ. 4): ಕರ್ನಾಟಕ ಕರಾವಳಿಯ ಮೀನುಗಾರರ ಕ್ರಿಯಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ(ರಿ) ಉಚ್ಚಿಲ ಇದರ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಇವರನ್ನು ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ 1941) ಇದರ ಕುಂದಾಪುರ ಶಾಖೆಯ ವತಿಯಿಂದ ಸನ್ಮಾನಿಸಲಾಯಿತು.
ಎಪ್ರಿಲ್, 4 ರಂದು ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ಸಭಾಭವನದಲ್ಲಿ ಆಯೋಜಿಸಿದ್ದ ಗುರಿಕಾರರ ಸಭೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಇವರನ್ನು ಸನ್ಮಾನಿಸಲಾಯಿತು. ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ 1941) ಇದರ ಕುಂದಾಪುರ ಶಾಖಾಧ್ಯಕ್ಷರಾದ ಕೆ.ಕೆ ಕಾಂಚನ್, ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ 1941) ಕುಂದಾಪುರ ಶಾಖೆಯ ಮಾಜಿ ಅಧ್ಯಕ್ಷರುಗಳಾದ ಶ್ರೀ ಹಿರಿಯಣ್ಣ, ಎಂ.ಎಂ ಸುವರ್ಣ, ಉಪಾಧ್ಯಕ್ಷರಾದ ಶ್ರೀ ಪುಂಡಲೀಕ ಬಂಗೇರ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶ್ರೀ ಶಿವರಾಮ ಕೋಟ, ಕುಂದಾಪುರ ಪುರಸಭೆಯ ಅಧ್ಯಕ್ಷರಾದ ಶ್ರೀಮತಿ ವೀಣಾ ಭಾಸ್ಕರ್ ಮೆಂಡನ್, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶ್ರೀಮತಿ ರತ್ನಾ ರಮೇಶ್ ವಿ. ಕುಂದರ್ ಹಾಗೂ ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ ಇದರ ವಿವಿಧ ಶಾಖೆಗಳ ಅಧ್ಯಕ್ಷರುಗಳು ಬಗ್ವಾಡಿ ಹೋಬಳಿ ವ್ಯಾಪ್ತಿಯ ಗುರಿಕಾರರು ಹಾಗೂ ಸಮಿತಿಯ ಸದಸ್ಯರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.