ಉಡುಪಿ (ಏ, 5): ಕರೋನಾ ಕಾರಣದಿಂದಾಗಿ ಎಸ್.ಎಸ್.ಎಲ್.ಸಿ ತರಗತಿಗಳು 7 ತಿಂಗಳು ವಿಳಂಬವಾಗಿ ಆರಂಭವಾದ ಹಿನ್ನೆಲೆಯಲ್ಲಿ ಪಠ್ಯಕ್ರಮಕ್ಕೆ ಸಂಭಂಧಪಟ್ಟಂತೆ ಎಲ್ಲಾ ವಿಷಯಗಳಿಗೆ ಸರಳ ಅಧ್ಯಯನ ಕ್ರಮ ಅನುಸರಿಸಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗುವ ಅದರಲ್ಲೂ ವಿಶೇಷವಾಗಿ ನಿಧಾನಗತಿಯ ಕಲಿಕೆಯ ವಿದ್ಯಾರ್ಥಿಗಳು ಓದಿ ಕಲಿತು ಪರೀಕ್ಷೆ ಪಾಸಾಗಲು ಯೋಗ್ಯವಾಗಿರುವ 280 ಪುಟಗಳ” ಗೆಲುವಿನ ಹೆಜ್ಜೆ “ಪುಸ್ತಕವನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅನಾವರಣಗೊಳಿಸಿದರು.
ಅವರುಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಿದ “ಗೆಲುವಿನ ಹೆಜ್ಜೆ" ಪುಸ್ತಕವನ್ನು ಎಪ್ರಿಲ್ 5 ರ ಸೋಮವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅನಾವರಣಗೊಳಿಸಿ ಮಾತನಾಡಿದರು.
ಗೆಲುವಿನ ಹೆಜ್ಜೆ’ ಪುಸ್ತಕ ಮುದ್ರಣಕ್ಕೆ ನೆರವು ನೀಡಿದ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಇದರ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್ ರವರು 3 ಸಾವಿರ ಪ್ರತಿಗಳನ್ನು ಮುದ್ರಿಸಿ, ಮಕ್ಕಳ ಕಲಿಕೆಗೆ ಸಹಕಾರ ನೀಡಿದ್ದನ್ನು ಜಿಲ್ಲಾಧಿಕಾರಿಯವರು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಡಾ.ಜಿ. ಶಂಕರ್ ಅವರನ್ನು ಸನ್ಮಾನಿಸಲಾಯಿತು. ನಾಡೋಜ ಡಾ.ಜಿ. ಶಂಕರ್ ಮಾತನಾಡಿ, ಬಡವರ ಮಕ್ಕಳ ಕಲಿಕೆಗೆ ಈ ಪುಸ್ತಕ ಪ್ರೇರಣೆಯಾಗಲಿ ಹಾಗೂ ಕಲಿಕೆಯಲ್ಲಿ ನಿಧಾನಗತಿಯಲ್ಲಿರುವ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿ ಎಂದು ಹೇಳಿದರು. ನಂತರ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಗೆಲುವಿನ ಹೆಜ್ಜೆ ಪುಸ್ತಕ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಡಿಡಿಪಿಐ ಎನ್. ಎಚ್. ನಾಗೂರ, ವೇದಮೂರ್ತಿ, ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.