ಮೂಡುಬಿದ್ರಿ (ಏ, 8): ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗ ಆಯೋಜಿಸಿದ್ದ ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಉದ್ಘಾಟನೆ ಏ. 8 ರಂದು ನಡೆಯಿತು. ‘ಪೈಥಾನ್ ಬಳಸಿ ಕೃತಕ ಬುದ್ಧಿಮತ್ತೆಯ ಉಪಯೋಗಗಳು’ (Applications of Artificial Intelligence using Python) ಎಂಬ ವಿಷಯದಲ್ಲಿ ನಡೆದ ಈ ಕಾರ್ಯಾಗಾರವನ್ನು ಪ್ರಾಂಶುಪಾಲ ಡಾ.ಆರ್.ಜಿ. ಡಿ’ಸೋಜಾ ರವರು ಉದ್ಘಾಟಿಸಿದರು. ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐಎಸ್ಟಿಇ) ಸಹಯೋಗದೊಂದಿಗೆ ಈ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಎನ್ಎಂಎಎಂಐಟಿ ನಿಟ್ಟೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ. ಬಾಲಾಜಿ ಆಗಮಿಸಿದ್ದರು. ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್, ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಎಲೆಕ್ಟ್ರಾನಿಕ್ಸ್ ವಿಭಾಗ ಮುಖ್ಯಸ್ಥ ಪ್ರೊ.ಗಂಗಾಧರ ಸ್ವಾಗತಿಸಿದರು. ಪ್ರೊ. ರೆಬೇಕ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಕಾರ್ಯಕ್ರಮ ಸಂಯೋಜಕರಾದ ಪ್ರೊ. ಎಸ್.ವಿ. ಪ್ರಸಾದ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ಇನ್ನೋರ್ವ ಸಂಯೋಜಕಿ ಪ್ರೊ.ನಾಝಿಯಾ ಕಾರ್ಯಕ್ರಮ ನಿರೂಪಿಸಿದರು.