ಕೋಟೇಶ್ವರ (ಏ, 8): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಹಾಗೂ ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಮೇ 2 ರಂದು ನಡೆಯಲಿರುವ 25 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಾಮೂಹಿಕ ವೀಳ್ಯ ಶಾಸ್ತ್ರ ಕಾರ್ಯಕ್ರಮ ಹಾಗೂ ವಧು- ವರರಿಗೆ ಉಡುಗೆ ತೊಡುಗೆಗಳ ವಿತರಣಾ ಕಾರ್ಯಕ್ರಮ ಹಾಲಾಡಿಯ ಶ್ರೀಮತಿ ಶಾಲಿನಿ ಜಿ. ಶಂಕರ್ ಕನ್ವೆನ್ಷನ್ ಸೆಂಟರ್ ನಲ್ಲಿ ಏಪ್ರಿಲ್ 8 ರಂದು ನೆರವೇರಿತು.
ಡಾ. ಜಿ. ಶಂಕರ್ ಹಾಗೂ ಶ್ರೀಮತಿ ಶಾಲಿನಿ ಜಿ. ಶಂಕರ್ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತದನಂತರ ಸಾಮೂಹಿಕ ವೀಳ್ಯ ಶಾಸ್ತ್ರ ಕಾರ್ಯಕ್ರಮ ಹಾಗೂ ವಧು- ವರರಿಗೆ ಉಡುಗೆ ತೊಡುಗೆ ಗಳ ವಿತರಣಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಇದರ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಹಾಗೂ ಶ್ರೀಮತಿ ಶಾಲಿನಿ ಜಿ. ಶಂಕರ್, ಪುತ್ರಿ ಶಾಮಿಲಿ, ಸಹೋದರ ಉದ್ಯಮಿ ಶಿವ ಎಸ್. ಕರ್ಕೇರ, ಗೀತಾನಂದ ಫೌಂಡೇಶನ್(ರಿ) ಕೋಟ ಇದರ ಪ್ರವರ್ತಕರಾದ ಶ್ರೀ ಆನಂದ ಸಿ. ಕುಂದರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ(ರಿ) ಉಚ್ಚಿಲ ಇದರ ಅಧ್ಯಕ್ಷರಾದ ಜಯ.ಸಿ ಕೋಟ್ಯಾನ್, ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ 1941) ಇದರ ಕುಂದಾಪುರ ಶಾಖಾಧ್ಯಕ್ಷರಾದ ಕೆ.ಕೆ ಕಾಂಚನ್, ಬೆಣ್ಣೆ ಕುದ್ರು ಸಂಯುಕ್ತ ಸಭೆಯ ಅಧ್ಯಕ್ಷ ಸತೀಶ್ ಅಮೀನ್, ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶಿವರಾಮ ಕೋಟ ಹಾಗೂ ಮಾಜಿ ಅಧ್ಯಕ್ಷರುಗಳಾದ ವಿನಯ ಕರ್ಕೇರ, ಸಂಜೀವ ಸುವರ್ಣ, ಸದಾನಂದ ಬಳ್ಕೂರು, ಸತೀಶ್ ಎಂ. ನಾಯ್ಕ, ಗಣೇಶ್ ಕಾಂಚನ್ ಹಾಗೂ ಸಂಘಟನೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಹಿರಿಯಡ್ಕ ಹಾಗೂ ಪದಾಧಿಕಾರಿಗಳು, ಗುರಿಕಾರರುಗಳು, ವಿವಿಧ ಘಟಕಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
ಸತತ 12 ನೇ ಬಾರಿ ನಡೆಯಲಿರುವ ಈ ಸಾಮೂಹಿಕ ವಿವಾಹ ಕಾರ್ಯಕ್ರಮ ಇದೇ ಮೇ 2 ರಂದು ಹಾಲಾಡಿಯ ಶ್ರೀಮತಿ ಶಾಲಿನಿ ಜಿ. ಶಂಕರ್ ಕನ್ವೆನ್ಷನ್ ಸೆಂಟರ್ ನಲ್ಲಿ ಗೋಧೋಳಿ ಲಗ್ನ ಮುಹೂರ್ತದಲ್ಲಿ ನಡೆಯಲಿದೆ.