ಮಂಗಳೂರು (ಏ, 10) : ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳ ಮುಷ್ಕರದಿಂದಾಗಿ ಸಾರಿಗೆ ವ್ಯವಸ್ಥೆಯಲ್ಲಾದ ವ್ಯತ್ಯಯದಿಂದಾಗಿ ಮಂಗಳೂರು ವಿಶ್ವವಿದ್ಯಾನಿಲಯವು ಏಪ್ರಿಲ್ 12 ರಂದು ನಿಗದಿಪಡಿಸಿದ್ದ ಎಲ್ಲಾ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿದೆ.
ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ನಿಗದಿ ಪಡಿಸಿ ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು, ಉಳಿದ ಪರೀಕ್ಷೆಗಳು ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಂತೆ ನಡೆಯುತ್ತದೆ ಅದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಮಂಗಳೂರು ವಿ.ವಿ. ಪರೀಕ್ಷಾಂಗ ಕುಲಸಚಿವರಾದ ಪ್ರೋ. ಪಿ. ಎಲ್. ಧರ್ಮರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.