ಬೆಂಗಳೂರು (ಎ. 20): ಕೋವಿಡ್ ಎರಡನೇ ಅಲೆ ನಿಯಂತ್ರಣ ಮೀರಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಎಪ್ರಿಲ್ 21ರಾತ್ರಿ 9 ಗಂಟೆಯಿಂದ ರಿಂದ ಮೇ 4 ಬೆಳಗ್ಗೆ 6 ಗಂಟೆಯ ವರೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ.
ಎಪ್ರಿಲ್ 21ರಿಂದ ಪ್ರತಿ ದಿನ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದ್ದು, ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಪ್ಯೂ ಇರಲಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ವಿಕೆಂಡ್ ಕರ್ಪ್ಯೂ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.
ಎಲ್ಲಾ ಶಾಲೆ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು, ಸ್ವಿಮ್ಮಿಂಗ್ ಪೂಲ್, ಚಿತ್ರ ಮಂದಿರ , ಶಾಪಿಂಗ್ ಮಾಲ್, ಯೋಗ& ಜಿಮ್ ಕೇಂದ್ರಗಳು , ಕ್ರೀಡಾ ಸಂಕೀರ್ಣ, ಪಾರ್ಕ್, ಧಾರ್ಮಿಕ ಕೇಂದ್ರಗಳನ್ನು ಬಂದ್ ಮಾಡಲು ಆದೇಶಿಸಲಾಗಿದೆ. ರಾಜಕೀಯ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಭೆಗಳಿಗೆ ನಿರ್ಬಂಧ ವಿಧಿಸಲಾಗಿದ್ದು
ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.