ಬೆಂಗಳೂರು (ಏ. 26) : ಕೊರೋನಾ ಎರಡನೇ ಅಲೆ ರಾಜ್ಯದಲ್ಲಿ ಪರಿಸ್ಥಿತಿ ಕೈ ಮೀರಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಏಪ್ರಿಲ್ 27 ರಿಂದ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್ ಡೌನ್ ಮಾಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಿರ್ಧಾರ ತೆಗೆದುಕೊಂಡಿದ್ದಾರೆ. ಸಂಪುಟ ಸಭೆಯಲ್ಲಿ ಭಾಗಿಯಾಗಿದ್ದ ಎಲ್ಲಾ ಸಚಿವರೂ ಕೂಡ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
ಮಂಗಳವಾರ ಸಂಜೆಯಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ಸಿಎಂ ಹೇಳಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದ್ದು, ಆ ನಂತರ ಕಟ್ಟುನಿಟ್ಟಿನ ಲಾಕ್ ಡೌನ್ ಮಾಡಲಾಗುತ್ತದೆ. ಆದರೆ ಕೃಷಿ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ಲಾಕ್ಡೌನ್ ನಲ್ಲಿ ವಿನಾಯಿತಿ ನೀಡಲಾಗಿದೆ .