ಕುಂದಾಪುರ (ಏ, 27) : ದೇಶಾದ್ಯಂತ ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುತ್ತಿರುವುದರಿಂದ ಮುಂದಿನ 60 ದಿನಗಳ ವೆರೆಗೆ ರಕ್ತದಾನ ಮಾಡಲು ಸಾಧ್ಯವಾಗದಿರುವುದರಿಂದ, ಆ ಸಮಯದಲ್ಲಿ ರಕ್ತದ ಅಭಾವ ಉಂಟಾಗುವ ಸಾಧ್ಯತೆ ಇರುವುದರಿಂದ ಬಿಜೆಪಿ ಯುವಮೋರ್ಚಾ ಕುಂದಾಪುರ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ- ರಕ್ತ ನಿಧಿ ಕೇಂದ್ರ ಕುಂದಾಪುರ ಇವರ ಸಹಯೋಗದೊಂದಿಗೆ ಏಪ್ರಿಲ್ 27 ರಂದು ಕುಂದಾಪುರದ ಆರ್ ಎನ್ ಶೆಟ್ಟಿ ಸಭಾಭವನದಲ್ಲಿ ಎಲ್ಲಾ ಕೋವಿಡ್ ಮಾರ್ಗಸೂಚಿ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿಕೊಂಡು ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದ್ದರು.
ರಕ್ತದಾನ ಶಿಬಿರದ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮಂಡಳಿ ರಾಜ್ಯ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿ, ಕ್ಷೇತ್ರಾಧ್ಯಕ್ಷರಾದ ಶಂಕರ ಅಂಕದಕಟ್ಟೆ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸದಾನಂದ ಬಳ್ಕೂರು, ಯುವಮೋರ್ಚಾ ಕುಂದಾಪುರ ಮಂಡಲ ಅಧ್ಯಕ್ಷ ಅವಿನಾಶ್ ಉಳ್ತೂರು, ಸಂಪತ್ ಕುಮಾರ್ ಶೆಟ್ಟಿ ಶಾನಾಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ, ಯುವಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಜ್ವಲ್ ಶೆಟ್ಟಿ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಚೇತನ್ ಬಂಗೇರ, ಸುನಿಲ್ ಖಾರ್ವಿ, ಉಪಾಧ್ಯಕ್ಷರಾದ ಅಭೀಷೇಕ ಅಂಕದಕಟ್ಟೆ, ವಿನಯ ಶಿರಿಯಾರ, ಕಾರ್ಯದರ್ಶಿಗಳಾದ ಅಭಯ್ ದೀಕ್ಷಿತ್ ಶೆಟ್ಟಿ, ಸಂತೋಪ್ ಪೂಜಾರಿ ತೆಕ್ಕಟ್ಟೆ, ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್, ನರಗ ಪ್ರಾಧಿಕಾರ ಅಧ್ಯಕ್ಷ ವಿಜಯ್ ಎಸ್ ಪೂಜಾರಿ, ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್, ದಿವಾಕರ್ ಕಡ್ಗಿ, ನಗರ ಮಹಾಶಕ್ತಿಕೇಂದ್ರದ ಅಧ್ಯಕ್ಷ ರಾಜೇಶ್ ಖಡ್ಗಿಮನೆ, ಹಿಂದುಳಿದ ವರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಬಾಣ, ಪುರಸಭೆ ಸದಸ್ಯ ಸಂತೋಷ್ ಶೆಟ್ಟಿ, ಪ್ರಭಾಕರ್, ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ್ದರು.