ತ್ರಾಸಿ (ಏ, 29): ಪ್ರಸ್ತುತ ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ರಕ್ತದ ತೀವ್ರ ಅಭಾವವಿರುವುದರಿಂದ
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ರಕ್ತನಿಧಿ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆ ರಕ್ತ ಕೇಂದ್ರ, ಉಡುಪಿ ಇವರ
ಸಹಯೋಗದೊಂದಿಗೆ ಏಪ್ರಿಲ್ 30ರ ಶುಕ್ರವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ತ್ರಾಸಿಯ ಸಾಕೇತ ವೈದ್ಯಕೀಯ ಪ್ರಯೋಗಾಲಯ ಹಾಗೂ ತಪಾಸಣಾ ಕೇಂದ್ರದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಈ ಮೂಲಕ ತಿಳಿಸಲಾಗಿದೆ.