ಕೊಲ್ಲೂರು (ಮೇ, 10) : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಂಸದ ಬಿ. ವೈ. ರಾಘವೇಂದ್ರ ಮತ್ತು ಅವರ ಧರ್ಮಪತ್ನಿ ತೇಜಸ್ವಿನಿ ರಾಘವೇಂದ್ರ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ್ ಶೆಟ್ಟಿ, ಮತ್ತು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.
ಇಡೀ ದೇಶಕ್ಕೆ ಆವರಿಸಿಕೊಂಡಿರುವ ಮಹಾಮಾರಿ ಕೊರೊನಾ ನಿವಾರಣೆಗಾಗಿ ಸಂಸದರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಳದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಕೆರಾಡಿ ಚಂದ್ರಶೇಖರ್ ಶೆಟ್ಟಿ ಯವರು ದೇವಾಲಯಕ್ಕೆ ಆಗಮಿಸಿದ ಅತಿಥಿ ಗಣ್ಯರಿಗೆ ಶಾಲು ಹೊದಿಸಿ ಗೌರವಿಸಿದರು.