ಉಡುಪಿ (ಮೇ. 12): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ IEEE ವಿದ್ಯಾರ್ಥಿ ಶಾಖೆಯ ಆಶ್ರಯದಲ್ಲಿ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಗಮನ ಸೆಳೆದ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯಿಂದ ಆರ್ಥಿಕವಾಗಿ ಪ್ರಾಯೋಜಿಸಲ್ಪಟ್ಟ ವಿವಿಧ ಪ್ರಾಜೆಕ್ಟ್ ಮಾದರಿಗಳನ್ನು ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು.
ವಿದ್ಯಾರ್ಥಿಶಾಖೆಯ ಅಧ್ಯಕ್ಷರಾದ ಶ್ರೀ ಅಶುತೋಷ್ ಕುಮಾರ್ ಕಾರ್ಯಕ್ರಮವನ್ನು ಸಂಯೋಜಿಸಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಭಾಗವಹಿಸಿದರು.