ಕುಂದಾಪುರ ( ಮೇ, 22): ಮಳೆಗಾಲದಲ್ಲಿನ ವಿದ್ಯುತ್ ಸಮಸ್ಯೆ ಹಾಗೂ ಮೆಸ್ಕಾಂ ಸಿಬ್ಬಂದಿಗಳು ಎದುರಿಸುತ್ತಿರುವ ಸವಾಲುಗಳ ಕುರಿತಾಗಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ
ಮೆಸ್ಕಾಂ ಅಧಿಕಾರಿಗಳ ಜೊತೆ ಕುಂದಾಪುರ ತಾಲೂಕು ಪಂಚಾಯತ್ ಕಛೇರಿಯಲ್ಲಿ ಸಭೆ ನಡೆಸಿದರು.
ಮಳೆಗಾಲದ ಸಂಧರ್ಭದಲ್ಲಿನ ಮೆಸ್ಕಾಂ ಸಿಬ್ಬಂದಿಗಳ ಸಮಸ್ಯೆಗಳ ಕುರಿತಾಗಿ ಮಾಹಿತಿಯನ್ನು ಪಡೆಯುವುದರ ಜೊತೆಗೆ ಕರೋನಾ ಕಾರಣದಿಂದಾಗಿ ಮನೆಯಲ್ಲೇ ಓದುತ್ತಿರುವ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಹಾಗೂ ಹಲವು ಉದ್ಯೋಗಸ್ಥರು ಮನೆಯಲ್ಲಿಂದಲೇ ಕೆಲಸ ನಿರ್ವಹಿಸುತ್ತಿರುವುದರಿಂದ ವಿದ್ಯುತ್ ವ್ಯತ್ಯಯ ಆಗದಂತೆ ನೋಡಿಕೊಳ್ಳಲು ಸಲಹೆ ನೀಡಿದರು.