ಗಂಗೊಳ್ಳಿ (ಮೇ, 26): ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಏಳು ಅರ್ಹ ಕುಟುಂಬಗಳಿಗೆ ತಲಾ 3.90 ಲಕ್ಷ ರೂಪಾಯಿ ಮೌಲ್ಯದ ದೋಣಿ ಮತ್ತಿತರ ಮೀನುಗಾರಿಕಾ ಸಲಕರಣೆಗಳನ್ನು ಬೈಂದೂರಿನ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ವಿತರಿಸಿದರು.
ಮೀನುಗಾರರು ನೆಮ್ಮದಿಯ ಜೀವನ ನಡೆಸುವಂತಾಗಬೇಕು ಎಂಬ ಆಶಯದೊಂದಿಗೆ ಮೀನುಗಾರಿಕೆ ದೋಣಿ, ಇಂಜಿನ್, ಬಲೆ, ಲೈಫ್ ಜಾಕೆಟ್, ಶಾಖ ನಿರೋಧಕ ಪೆಟ್ಟಿಗೆ ಹಸ್ತಾಂತರಿಸಲಾಗಿದೆ ಎಂದು ಶಾಸಕರು ಹೇಳಿದರು.
ಈ ಸಂದರ್ಭದಲ್ಲಿ ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಆನಂದ ಖಾರ್ವಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪ್ರೇಮ, ಗ್ರಾಮ ಪಂಚಾಯತ್ ಸದಸ್ಯ ರಾಘವೇಂದ್ರ ಪೈ ಮತ್ತಿತರರು ಉಪಸ್ಥಿತರಿದ್ದರು.