ಕುಂದಾಪುರ (ಜೂ. 05) : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರೊಫೆಷನಲ್ ಕೋರ್ಸುಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎನ್ನುವ ಉದ್ದೇಶದಿಂದ ಕಳೆದ ಹಲವು ವರ್ಷಗಳಿಂದ ಕುಂದಾಪುರದ ಕುಂದೇಶ್ವರ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸ್ಪೇಸ್) ಸಂಸ್ಥೆ ಸಿಎ/ಸಿಎಸ್ ಮತ್ತು ಸಿಎಂಎ ಪರೀಕ್ಷೆಗಳಿಗೆ ಅನೇಕ ವಿದ್ಯಾರ್ಥಿಗಳನ್ನು ಪರಿಪೂರ್ಣವಾಗಿ ತಯಾರಿಗೊಳಿಸಿ ಅಖಿಲ ಭಾರತ ಮಟ್ಟದಲ್ಲಿ ರ್ಯಾಂಕ್ ಮತ್ತು ಅತ್ಯುತ್ತಮ ಫಲಿತಾಂಶ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುತ್ತದೆ.
ಸಂಸ್ಥೆಯ ವಿದ್ಯಾರ್ಥಿಗಳು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ 21 ಮತ್ತು 27ನೇ ರ್ಯಾಂಕ್ ಗಳಿಸಿದ್ದಾರೆ. ಸಿಎಸ್ 2 ಬ್ಯಾಚ್ ವಿದ್ಯಾರ್ಥಿಗಳು ಶೇಕಡ 100 ಫಲಿತಾಂಶ ನೀಡಿರುತ್ತಾರೆ. ಸಂಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಸಂಸ್ಥೆಯಲ್ಲಿ ಬೋಧಕ ಸಿಬ್ಬಂದಿಗಳಾಗಿ ದೇಶದ ಬೇರೆ ಬೇರೆ ಭಾಗಗಳಿಂದ ಲೆಕ್ಕಪರಿಶೋಧಕರು ಮತ್ತು ಕಂಪನಿ ಸೆಕ್ರೆಟರಿಗಳು ಆಗಮಿಸಿ ವಿದ್ಯಾರ್ಥಿಗಳಿಗೆ ತಮ್ಮ ಅನುಭವವನ್ನು ಧಾರೆ ಎರೆಯುತ್ತಿದ್ದಾರೆ.
ದಾಖಲಾತಿ ಆರಂಭ:
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ರದ್ದಾಗಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ತೇರ್ಗಡೆ ಗಳಿಸಿರುವುದರಿಂದ ವಿದ್ಯಾರ್ಥಿಗಳು ತಮ್ಮ ಮುಂದಿನ ವಿದ್ಯಾಭ್ಯಾಸದ ಕುರಿತಾಗಿ ಆಯ್ಕೆಮಾಡಲು ಹಾದಿ ಸುಲಭವಾಗಿದೆ. ಆದ್ದರಿಂದ ಶಿಕ್ಷಾ ಪ್ರಭಾ ಅಕಾಡೆಮಿಯಲ್ಲಿ ಸಿಎ/ಸಿಎಸ್ ಮತ್ತು ಸಿಎಂಎ ಕೋರ್ಸುಗಳಿಗೆ ದ್ವಿತೀಯ ಪಿಯುಸಿ ಮತ್ತು ಪ್ರಥಮ ಪಿಯುಸಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಜೂನ್ 10 ರಿಂದ ಲೈವ್ ತರಗತಿಗಳು ಪ್ರಾರಂಭವಾಗಲಿದೆ. ವಿದ್ಯಾರ್ಥಿಗಳಿಗೆ ಪ್ರತಿದಿನ ಲೈವ್ ತರಗತಿಗಳನ್ನು ನಡೆಸಿ ವಿದ್ಯಾರ್ಥಿಗಳೊಂದಿಗೆ ಇಂಟರಾಕ್ಷನ್ ನಡೆಸಲಾಗುವುದು. ಲೈವ್ ನ ನಂತರ ತರಗತಿಗಳು ರೆಕಾರ್ಡ್ಆಗಿ ಆಪ್ ನಲ್ಲಿ ಉಳಿದುಕೊಳ್ಳಲಿದ್ದು ಅದನ್ನು ಪುನಃ ವಿದ್ಯಾರ್ಥಿಗಳು ಎಷ್ಟು ಬಾರಿ ಬೇಕಾದರೂ ವೀಕ್ಷಿಸಬಹುದು. ಆಸಕ್ತ ವಿದ್ಯಾರ್ಥಿಗಳು ಆನ್ ಲೈನ್ ಮೂಲಕವೇ ದಾಖಲಾತಿ ಮಾಡಿಕೊಳ್ಳಬಹುದು.
ಪದವಿಯೊಂದಿಗೆ ಸಿಎ/ಸಿಎಸ್/ಸಿಎಂಎ:
ದ್ವಿತೀಯ ಪಿಯುಸಿ ಮುಗಿಸಿರುವ ವಿದ್ಯಾರ್ಥಿಗಳು ಸಿಎಸಿಎಸ್/ಸಿಎಂಎ ಕೋರ್ಸುಗಳನ್ನು ಪದವಿ ಶಿಕ್ಷಣದ ಜೊತೆಗೆ ಪೂರ್ಣಗೊಳಿಸುವ ಅವಕಾಶವಿದ್ದು ,ಸಂಸ್ಥೆಯಲ್ಲಿ ಅದಕ್ಕೆ ತಕ್ಕಂತೆ ಬ್ಯಾಚು ಗಳ ಸಮಯ ಮತ್ತು ತರಗತಿಗಳನ್ನು ನಿಗದಿಪಡಿಸಲಾಗಿದ್ದು ವಿದ್ಯಾರ್ಥಿಗಳು ಪದವಿಯೊಂದಿಗೆ ಸಿಎ/ಸಿಎಸ್/ಸಿಎಂಎ ಕೋರ್ಸುಗಳನ್ನು ಯಾವುದೇ ಒತ್ತಡವಿಲ್ಲದೆ ಪೂರ್ಣಗೊಳಿಸಲು ಸಹಕಾರಿಯಾಗಲಿದೆ. ದೂರ ಶಿಕ್ಷಣ ಮತ್ತು ಸಂಧ್ಯಾ ಕಾಲೇಜಿನಲ್ಲಿ ಪದವಿ ಓದುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬ್ಯಾಚು ಗಳು ಲಭ್ಯವಿದ್ದು ಅವರ ಅನುಕೂಲಕ್ಕೆ ಸರಿಯಾಗಿ ತರಗತಿಗಳನ್ನು ನಿಗದಿ ಪಡಿಸಲಾಗಿದೆ.
ವಿದ್ಯಾರ್ಥಿವೇತನ ಮತ್ತು ಹಾಸ್ಟೆಲ್ ವ್ಯವಸ್ಥೆ:
ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಪಾಂಡಿತ್ಯ ದರ್ಪಣ ವಿದ್ಯಾರ್ಥಿ ವೇತನ ಸೌಲಭ್ಯ ಲಭ್ಯವಿದ್ದು, ಶೈಕ್ಷಣಿಕವಾಗಿ ಮುಂದಿದ್ದು ಆರ್ಥಿಕವಾಗಿ ನಷ್ಟವನ್ನು ಅನುಭವಿಸುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದ್ದು ವಿದ್ಯಾರ್ಥಿಗಳು ಪ್ರಯೋಜನವನ್ನು ಪಡೆಯಬಹುದಾಗಿದೆ.
ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಹುಡುಗರು ಮತ್ತು ಹುಡುಗಿಯರಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯವಿದ್ದು, ಆಸಕ್ತ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆಯಬಹುದಾಗಿದೆ. ಸಿಎ/ಸಿಎಸ್ಸಿಎಂಎ ಕೋರ್ಸುಗಳ ಹೆಚ್ಚಿನ ಮಾಹಿತಿಗಾಗಿ www.shikshaprabha.com ಅಥವಾ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.