ಶಿರ್ವ(ಜೂ, 5): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಎನ್ಸಿಸಿ ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಘಟಕದ ಸ್ವಯಂಸೇವಕರ ಮನೆಯ ಅಂಗಳಗಳಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು.

ಕಾಲೇಜಿನ ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಅವರು ಔಷಧ ಗಿಡಗಳನ್ನು ಸಾಂಕೇತಿಕವಾಗಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ,ಯುವಕರನ್ನು ಪ್ರೇರೇಪಿಸಿದರು. ಕಾಲೇಜಿನ ಪ್ರಾಂಶುಪಾಲರು ಡಾ|ಹೆರಾಲ್ಡ್ ಐವನ್ ಮೋನಿಸ್ ರವರು ಎಲ್ಲರಿಗೂ ಶುಭಹಾರೈಸಿದರು. ಎನ್ಸಿಸಿ ಘಟಕದ ಸಹ ಸಂಯೋಜಕಿ ಯಶೋಧಾ ,ಸೀನಿಯರ್ ಕ್ಯಾಡೆಟ್ ಅಂಡರ್ ಆಫೀಸರ್ ರಾಮದಾಸ್,
ಜೂನಿಯರ್ ಅಂಡರ್ ಆಫೀಸರ್ ಪ್ರವಿತ್ ಮತ್ತು ರಿಯಾನ್ ರಿಷಿ ಅಲ್ಫೋನ್ಸೋ ಹಾಗೂ ಎಲ್ಲಾ ಕ್ಯಾಡೆಟ್ ಗಳು ಕಾರ್ಯಕ್ರಮಕ್ಕೆ ಸಹಕರಿಸಿದರು.










