ಗೋಪಾಡಿ (ಜೂ, 07): ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಡು ಗೋಪಾಡಿಯಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸುರೇಂದ್ರ ಕಾಂಚನ್ ಸಂಗಮ್ ಹಾಗೂ ಅಂಗನವಾಡಿ ಶಿಕ್ಷಕಿ ಶ್ರೀಮತಿ ಜಯಂತಿ ರವರು ಸರಿ ಸುಮಾರು 15 ಕ್ಕೂ ಹೆಚ್ಚು ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಸರಳವಾಗಿ ಆಚರಿಸಿದರು.
ಕೋವಿಡ್ ನಿಯಮದ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.