ಹೆಮ್ಮಾಡಿ (ಜೂ, 07): ಸೇವಾ ಭಾರತಿ ಕರ್ನಾಟಕ, ಪ್ರೇರಣಾ ಎಜುಕೇಶನಲ್ ಟ್ರಸ್ಟ್ (ರಿ) ಶಿವಮೊಗ್ಗ ಹಾಗೂ ಕುಂದಾಪುರ ಎಜುಕೇಶನಲ್ ಸೊಸೈಟಿ (ರಿ) ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಕೊರೊನಾ ವಾರಿಯರ್ಸ್ಗಳಿಗೆ ಆಹಾರದ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಜೂನ್ 07 ರಂದು ಮಾರಣಕಟ್ಟೆಯಲ್ಲಿ ಚಾಲನೆ ನೀಡಲಾಯಿತು.
ಧಾರ್ಮಿಕ ದತ್ತಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಕಾರ್ಯಕ್ರಮ ಉದ್ಘಾಟಿಸಿದರು. ಸಂಸದರಾದ ಬಿ. ವೈ. ರಾಘವೇಂದ್ರ, ಬೈಂದೂರು ಶಾಸಕ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿ, ಬೈಂದೂರು ಬಿಜೆಪಿ ಅಧ್ಯಕ್ಷರಾದ ಶ್ರೀ ದೀಪಕ್ ಕುಮಾರ್ ಶೆಟ್ಟಿ ಹಾಗೂ ಸೇವಾ ಭಾರತಿಯ ಪ್ರಸನ್ನ ರವರು ಸೇರಿದಂತೆ ಬಿಜೆಪಿಯ ಮುಖಂಡರು ಉಪಸ್ಥಿತರಿದ್ದರು.