ಕುಮಟಾ (ಜೂ,13): ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡೆಕೋಡಿಯ ಕು. ದಿಶಾ ಭಾಗವತ ಅಮೇರಿಕಾದ ಕ್ಯಾಲಿಫೋರ್ನಿಯ ಬಾರ್ ಕೌನ್ಸಿಲ್ ನಲ್ಲಿ ಅಟಾರ್ನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ಉತ್ತರಕನ್ನಡ ಜಿಲ್ಲೆ, ರಾಜ್ಯ ಹಾಗೂ ದೇಶದ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆರಿಸಿದ್ದಾರೆ.
ಬೆಂಗಳೂರಿನ ಪ್ರತಿಷ್ಠಿತ ಕ್ರೈಸ್ಟ್ ಕಾಲೇಜಿನಲ್ಲಿ ಕಾನೂನು ಪದವಿ ಮುಗಿಸಿ ನಂತರ ಅಮೆರಿಕದಲ್ಲಿ ಯುಎಸ್ಸಿ ಮಾಸ್ಟರ್ ಡಿಗ್ರಿ ಪಡೆದಿರುತ್ತಾರೆ. ಇವರು ಬಹುಮುಖ ಪ್ರತಿಭೆಯಾಗಿದ್ದು, ಉದ್ಯಮಿ ಮಂಜುನಾಥ ಭಾಗವತ್ ಹಾಗೂ ಲಲಿತಾ ಭಾಗವತ್ ದಂಪತಿಯ ಪುತ್ರಿಯಾಗಿದ್ದಾರೆ.