ಕುಂದಾಪುರ (ಜೂ, 14): ಹಳ್ಳಿಹೊಳೆಗ್ರಾಮ ಪಂಚಾಯತ್ವ್ಯಾಪ್ತಿಯಲ್ಲಿರುವ ವಿಶೇಷ ಚೇತನರಿಗೆ ಎಪಿಡಿ( ದಿ ಅಸೋಸಿಯೇಶನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ) ಸಂಸ್ಥೆಯಿಂದ ಫುಡ್ ಕಿಟ್ ವಿತರಣಾ ಕಾರ್ಯಕ್ರಮ ಜೂನ್ , 14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಎಪಿಡಿ ಸಂಸ್ಥೆಯ ನೋಡಲ್ ಅಧಿಕಾರಿಗಳಾದ ಶ್ರೀ ಹರೀಶ ಶೆಟ್ಟಿಯವರು ಪುಡ್ ಕಿಟ್ ವಿತರಣೆ ಮಾಡಿ ಎಪಿಡಿ ಸಂಸ್ಥೆಯ ಬಗ್ಗೆ ಮತ್ತು ಜೀವನೋಪಾಯ ಕಾರ್ಯಕ್ರಮದ ತರಬೇತಿ ಬಗ್ಗೆ ಮಾಹಿತಿಯನ್ನು ನೀಡಿದರು.
ಪಂಚಾಯತ್ ಅಧ್ಯಕ್ಷ ಶ್ರೀ ಪ್ರದೀಪ ಕೊಠಾರಿ, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಮತ್ತು ಗ್ರಾಮದ ವಿಶೇಷಚೇತನರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಮಾಧವ ದೇವಾಡಿಗ ಸ್ವಾಗತಿಸಿ, ನಿರೂಪಿಸಿದರು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಶ್ರೀ ಆಕಾಶ್ ಶೆಟ್ಟಿ ವಂದಿಸಿದರು.