ಕುಂದಾಪುರ (ಜೂನ್, 15) : ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು ಮತ್ತು ಪ್ರಸಿದ್ದ ಮೈಕ್ರೋಸಾಫ್ಟ್ ನ ಟ್ರೈನಿಂಗ್ ಪಾರ್ಟ್ನರ್ ಕಂಪನಿಯು ಒಂದು ಮಹತ್ವದ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ತನ್ನ ಬೆಳವಣಗೆಯ ಚಟುವಟಿಕೆಗೆ ಸಾಕ್ಷಿಯಾಯಿತು. ಈ ಒಪ್ಪಂದದಿಂದ ವಿದ್ಯಾರ್ಥಿಗಳು ಉನ್ನತ ಶ್ರೇಣಿಯ ಮತ್ತು ಹೊಸ ತಂತ್ರಜ್ಞಾನ ಭರಿತ ಕೋರ್ಸ್ ಗಳನ್ನು ಕಲಿತು, ವಿಶ್ವದ ಪ್ರಸಿದ್ಧ ಸಾಫ್ಟ್ ವೇರ್ ಕಂಪೆನಿಯಾದ ಮೈಕ್ರೋಸಾಫ್ಟ್ ನಿಂದ ಪ್ರಮಾಣಪತ್ರ ಪಡೆಯುವ ಅವಕಾಶವಿರುತ್ತದೆ.

ವಿದ್ಯಾರ್ಥಿಗಳು ಅಂಕಗಳಿಗೆ ಮಾತ್ರ ಸೀಮಿತರಾಗದೆ, ಜ್ಞಾನ ಹಾಗೂ ಉದ್ಯೋಗವಕಾಶ ಹೆಚ್ಚಿಸಿಕೊಳ್ಳಲು ಈ ಒಪ್ಪಂದ ಪ್ರಮುಖ ಪಾತ್ರವಹಿಸುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಕಂಪನಿಯ ವತಿಯಿಂದ ಶ್ರೀ ಸಂದೀಪ್ ಜಿಯಾನ್ ಜತೇನಿ ಹಾಗೂ ಕಾಲೇಜು ವತಿಯಿಂದ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ಒಪ್ಪಂದಕ್ಕೆ ಸಹಿ ಮಾಡಿದರು.

ಕಾಲೇಜಿನಲ್ಲಿ ಬಹಳ ವೇಗದಲ್ಲಿ ಆಗುತ್ತಿರುವ ಬೆಳವಣಿಗೆ, ಮತ್ತು ಇದಕ್ಕೆ ಅನುಗುಣವಾಗಿ ಈ ವರ್ಷದಲ್ಲಿ ಕ್ಯಾಂಪಸ್ ಸಂದರ್ಶನದ ಮೂಲಕ ವಿದ್ಯಾರ್ಥಿಗಳಿಗೆ ದೊರಕಿದ ಉದ್ಯೋಗವಕಾಶಕ್ಕೆ ಕಾಲೇಜಿನ ಅಧ್ಯಕ್ಷ ಶ್ರೀ ಸಿದ್ದಾರ್ಥ ಜೆ ಶೆಟ್ಟಿ ಸಂತೋಷ ವ್ಯಕ್ತಪಡಿಸಿ ಸಂಸ್ಥೆಯ ಎಲ್ಲಾ ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.










