ಬೆಂಗಳೂರು (ಜೂ, 20): ಕರ್ನಾಟಕ ರಾಜ್ಯ ಸರ್ಕಾರವು ಮಳೆಗಾಲ ಸಂದರ್ಭದಲ್ಲಿನ ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಇತ್ತೀಚೆಗೆ ಚಂಡಮಾರುತದಿಂದಾಗಿ ಕರಾವಳಿ ಭಾಗದಲ್ಲಿ 300 ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಹಾನಿಯಾಗಿದ್ದು, ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ ಪರಿಹಾರ, ಹಾಗೆಯೇ ಭಾಗಶಃ ಹಾನಿಯಾಗಿರುವ ಮನೆಗೆ 1ಲಕ್ಷ ರೂ. ಮತ್ತು ನೀರು ನುಗ್ಗಿ ಮನೆಗೆ ಹಾನಿಯಾಗಿದ್ದರೆ 10 ಸಾವಿರ ರೂ. ಪರಿಹಾರ ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧಾರ ಕೈಗೊಂಡಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.