ವಂಡ್ಸೆ (ಜೂ, 22): ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಪಾಡಿಕೊಳ್ಳಲು ಯೋಗಾಸನ ಅತ್ಯವಶ್ಯಕ. ಆ ನಿಟ್ಟಿನಲ್ಲಿ ಜೂನ್, 21 ರಂದು ಜಗತ್ತಿನ ವಿವಿಧ ಭಾಗಗಳಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಗುತ್ತದೆ. ನಮ್ಮ ರಾಜ್ಯದ ವಿವಿಧ ಭಾಗಗಳಲ್ಲೂ ವಿಶ್ವ ಯೋಗ ದಿನಾಚರಣೆ ಆಚರಿಸಿದ್ದು, ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ತಮ್ಮ ನೆಂಪುವಿನಲ್ಲಿರುವ ನಿವಾಸದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸುವುದರ ಮೂಲಕ ಯೋಗಾಸನದ ಮಹತ್ವವನ್ನು ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಜಯರಾಮ ಶೆಟ್ಟಿ ಕಾನ್ಬೇರು, ಗ್ರಾಮ ಪಂಚಾಯತ್ ಸದಸ್ಯ ಪ್ರಶಾಂತ ಪೂಜಾರಿ, ರಘುರಾಮ ಶೆಟ್ಟಿ ತಲ್ಲೂರು ಹಾಗೂ ಅನುರ್ ಮೆಂಡನ್ ಉಪಸ್ಥಿತರಿದ್ದರು.