ಕುಂದಾಪುರ (ಜೂ, 30): ದೇಶದ ವಿವಿಧ ರಾಜ್ಯಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ಪೂರೈಕೆಯ ಜೊತೆಗೆ ಉತ್ತಮ ಆದರಾತಿಥ್ಯಕ್ಕೆ ಹೆಸರುವಾಸಿಯಾದ ಶ್ರೀ ಗೋವಿಂದ ಬಾಬು ಪೂಜಾರಿ ಮಾಲೀಕತ್ವದ ಶೆಫ್ಟಾಕ್ ಸಂಸ್ಥೆ ಕ್ವಾಲಿಟಿ ಫುಡ್ ಕಸ್ಟಮರ್ ಸ್ಯಾಟಿಸ್ಫ್ಯಾಕ್ಷನ್ ಅವಾರ್ಡ್ ಗೆ ಭಾಜನರಾಗಿರುತ್ತದೆ.

ದೆಹಲಿಯಲ್ಲಿ ನಡೆದ ಇಂಟರ್ ನ್ಯಾಷನಲ್ ಅಚಿವರ್ಸ್ ಕಾನ್ಫರೆಸ್ಸ್ ಸಮಾರಂಭದಲ್ಲಿ ಶೆಫ್ಟಾಕ್ ಸಂಸ್ಥೆಯು ಅಹಾರದ ಅತ್ಯುತ್ತಮ ಗುಣಮಟ್ಟಕ್ಕೆ ಕ್ವಾಲಿಟಿ ಪುಡ್ ಕಸ್ಟಮರ್ ಸ್ಯಾಟಿಸ್ಫ್ಯಾಕ್ಷನ್ ಅವಾರ್ಡ್ನ್ನು ಶೆಫ್ಟಾಕ್ ಸಂಸ್ಥೆಯ ಆಡಳಿತ ನಿರ್ದೇಶಕ ಗೋವಿಂದ ಬಾಬು ಪೂಜಾರಿ ಪಡೆದುಕೊಂಡಿದ್ದಾರೆ.

ದೇಶದ ಪ್ರಮುಖ ನಗರಗಳಲ್ಲಿ ತಮ್ಮ ಹೋಟೆಲ್ ಉದ್ಯಮವನ್ನು ವಿಸ್ತರಿಸಿ ಸಾವಿರಾರು ಜನರಿಗೆ ಉದ್ಯೋಗ ನೀಡಿರುವ ಶ್ರೀ ಗೋವಿಂದ ಬಾಬು ಪೂಜಾರಿಯವರು ಉದ್ಯಮದ ಜೊತೆಗೆ ಸಮಾಜಸೇವೆಯಲ್ಲಿ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ತಮ್ಮ ಹುಟ್ಟೂರಿನಲ್ಲಿ ಶ್ರೀ ವರಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಿ ಕರೋನಾ ಲಾಕ್ಡೌನ್ ಸಂಧರ್ಬದಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಅಹಾರದ ಕಿಟ್ ಜೊತೆಗೆ ವೈದ್ಯಕೀಯ ಸಹಾಯ ನೀಡಿರುತ್ತಾರೆ.













