ವಂಡ್ಸೆ (ಜೂ, 28) : ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ನೆಟ್ ವರ್ಕ್ ಸಮಸ್ಯೆ ಹೆಚ್ಚಿದ್ದು, ಲಾಕ್ಡೌನ್ ಕಾರಣದಿಂದಾಗಿ ವಿದ್ಯಾರ್ಥಿಗಳಿಗೆ ಅನಿವಾರ್ಯವಾದ ಅನ್ ಲೈನ್ ಶಿಕ್ಷಣಕ್ಕೆ ನೆಟ್ ವರ್ಕ್ ಸಮಸ್ಯೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಸಂದಿಗ್ಧ ಪರಿಸ್ಥಿತಿಯನ್ನು ಸರಿಪಡಿಸುವ ಸಲುವಾಗಿ ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಸಂಬಂಧಪಟ್ಟ ನೆಟ್ವರ್ಕ್ ನಿರ್ವಹಣಾಧಿಕಾರಿಗಳೊಂದಿಗೆ ತಮ್ಮ ಗ್ರಹ ಕಛೇರಿಯಲ್ಲಿ ಜೂನ್, 22 ರಂದು ಸಭೆ ನಡೆಸಿದರು.
ನೆಟ್ ವರ್ಕ್ ಟವರ್ ಗಳ ಅಳವಡಿಕೆಯ ಕುರಿತಾದ ಆಡಳಿತಾತ್ಮಕ ಹಾಗೂ ತಾಂತ್ರಿಕ ಅಡಚಣೆಗಳನ್ನು ಸರಿಪಡಿಸಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಸಮಸ್ಯೆ ಬಗೆಹರಿಸಿ ಶೀಘ್ರ ಅನುಮತಿ ನೀಡುವಂತೆ ಸೂಚಿಸಲಾಗಿದೆ ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ತಿಳಿಸಿದ್ದಾರೆ.