ಶಿರ್ವ(ಜೂ, 29) : ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್ ಸಿ ಸಿ,ಎನ್ ಎಸ್ ಎಸ್ ,ಯೂತ್ ರೆಡ್ ಕ್ರಾಸ್,ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ,ಜಿಲ್ಲಾ ಸರ್ಕಾರಿ ಆಸ್ಪತ್ರೆ ,ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಇವರ ಸಂಯುಕ್ತ ಆಶ್ರಯದಲ್ಲಿ ಕರೋನಾ ಲಸಿಕಾ ಅಭಿಯಾನವನ್ನು ಆಯೋಜಿಸಲಾಗಿತ್ತು.
ಕಾಲೇಜಿನ ಎಲ್ಲಾ ಬೋಧಕ- ಬೋಧಕೇತರ ಸಿಬ್ಬಂದಿ ಗಳು ಹಾಗೂ ವಿದ್ಯಾರ್ಥಿಗಳಿಗೆ ಕಾಲೇಜಿನ ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಜೂನ್ 28ರಿಂದ ಲಸಿಕಾ ಶಿಬಿರ ಆಯೋಜಿಸಲಾಗುತ್ತಿದೆ.
ಕಾಲೇಜು ಆಡಳಿತ ವ್ಯವಸ್ಥೆಯ ಸಹಕಾರದಿಂದ ಕೋವಿಡ್ ನಿಯಂತ್ರಣ ನಿಯಮಾವಳಿಗಳನ್ನು ಪಾಲಿಸಿಕೊಂಡು ಲಸಿಕೆ ವಿತರಿಸಲಾಗುತ್ತಿದೆ ಎಂದು ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್. ಕೆ. ಪ್ರವೀಣ್ ಕುಮಾರ್ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಪ್ರಸ್ತುತ ಕೋವಿಡ್ ನಂತಹ ಸಾಂಕ್ರಮಿಕ ಕಾಯಿಲೆಗಳನ್ನು ಎದುರಿಸಬೇಕಾದರೆ ಕೋವಿಡ್ -19 ಲಸಿಕಾಕರಣ ಅವಶ್ಯಕವಾಗಿದ್ದು , ನಮ್ಮ ಶರೀರದಲ್ಲಿ ಇಮ್ಯೂನಿಟಿ ಶಕ್ತಿಗಳನ್ನು ವೃದ್ಧಿಸಿಕೊಳ್ಳಬೇಕಾಗಿರುವುದು ಇಂದಿನ ಅಗತ್ಯವಾಗಿದೆ ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಶಿರ್ವ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಸುಬ್ರಹ್ಮಣ್ಯ ಭಟ್ ರವರು ಜಿಲ್ಲಾಡಳಿತದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಲಸಿಕೆ ವಿತರಣೆ ಮಾಡಲಾಗುತ್ತಿದ್ದು, ಲಸಿಕೆ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿದೆ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಾಮಾಭಿವೃದ್ಧಿ ನಿರ್ದೇಶಕಿ ಯಶೋಧಾ, ಎನ್ಎಸ್ಎಸ್ ಅಧಿಕಾರಿ ಶ್ರೀ ಪ್ರೇಮನಾಥ್, ರಕ್ಷಾ, ಶ್ರೀಸ್ಯಾಮ್ ಜೋಯಲ್ ಡಯಾಸ್ ,ಯೂತ್ ರೆಡ್ ಕ್ರಾಸ್ ಸಂಯೋಜಕ ಶ್ರೀಮುರಳಿ, ರೋವರ್ಸ್-ರೇಂಜರ್ಸ್ ಲೀಡರ್ ಗಳಾದ ಶ್ರೀ ಪ್ರಕಾಶ್,ಶ್ರೀಮತಿ ಸಂಗೀತ ಪೂಜಾರಿ, ಸಮಾಜ ಸೇವಕ ಪವನ್ ಕುಮಾರ್ ಶಿರ್ವ ಉಪಸ್ಥಿತರಿದ್ದರು.
ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕರಾದ ಸುಧಾ, ವಿನಯ್, ಸಂಜಯ್, ದಿನೇಶ್ ಹಾಗೂ ಆಶಾ ಕಾರ್ಯಕರ್ತರಾದ ಅಮಿತ, ಪಾರ್ವತಿ, ರೆಹೆಮತ್ವರು ಲಸಿಕಾಕರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.