ಮಧುವನ (ಜು, 02) : ಇಲ್ಲಿನ ಇ ಸಿ ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ನಲ್ಲಿ ಕಾಲೇಜು ಪ್ರಾರಂಭಕ್ಕೆ ಮುಂಚಿತವಾಗಿ ವಿದ್ಯಾರ್ಥಿಗಳಿಗೆ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್ ಲಸಿಕಾಕರಣ ಹಮ್ಮಿಕೊಳ್ಳಲಾಗಿತ್ತು.
ಜೂನ್ 30 ಬುಧವಾರದಂದು 100 ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಲಸಿಕೆ ನೀಡಲಾಗಿದೆ ಎಂದು ಪ್ರಾಂಶುಪಾಲರಾದ ಶ್ರೀ ಆಕಾಶ್ ಸಾವಳ ಸಂಗ್ ತಿಳಿಸಿದರು. ಲಸಿಕೆ ನೀಡುವಲ್ಲಿ ಪ್ರಮುಖ ಪಾತ್ರವಹಿಸಿದ ಸೈಬರಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯವರಿಗೆ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ಧನ್ಯವಾದ ಸಮರ್ಪಿಸಿದರು. ಕಾಲೇಜಿನ ಆಡಳಿತಾಧಿಕಾರಿಗಳಾದ ಶ್ರೀ ಜೋಬಿನ್ ಜೋಸೆಫ್, ಉಪಾಪ್ರಾಂಶುಪಾಲೆ ಶ್ರೀಮತಿ ಚಂದ್ರಕಲಾ ಎಸ್ ಹಾಗೂ ಮಾರ್ಕೆಟಿಂಗ್ ಟೀಮ್ ನ ಸದಸ್ಯರು ಉಪಸ್ಥಿತರಿದ್ದರು.