ಹೆಮ್ಮಾಡಿ (ಜು, 3): ಬೈಕ್ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರರ ಚಿಕಿತ್ಸೆಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವತಿಯಿಂದ ಹತ್ತು ಸಾವಿರ ರೂಪಾಯಿಯ ಸಹಾಯ ಧನವನ್ನು ಮೊಗವೀರ ಮಹಾಜನ ಸೇವಾ ಸಂಘ (ರಿ) ಬಗ್ವಾಡಿ ಹೋಬಳಿ ಅಧ್ಯಕ್ಷರಾದ ಕೆ. ಕೆ. ಕಾಂಚನ್ ರವರು ಅವರ ಸಂಬಂಧಿಕರಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಸಂಘದ ಕಾರ್ಯದರ್ಶಿ ಸುರೇಶ್ ವಿಠಲವಾಡಿ ಉಪಸ್ಥಿತರಿದ್ದರು.