ಬೈಂದೂರು (ಜು, 5): ನಾವುಂದದ ಮಾನಸ ಸ್ಟುಡಿಯೋ ಮಾಲಕ ಅಶೋಕ್ ಕುಮಾರ್ ಶೆಟ್ಟಿ ಮದುವೆ ಕಾರ್ಯಕ್ರಮವೊಂದರ ಚಿತ್ರೀಕರಣಕ್ಕಾಗಿ ಮಗ ಪನ್ನಗ ಹಾಗೂ ಕುಮಾರ್ ರೊಂದಿಗೆ ತನ್ನ ಕಿಯಾ ಸೊನೆಟ್ ಕಾರಿನಲ್ಲಿ ಬೆಂಗಳೂರಿಗೆ ಹೋಗಿದ್ದರು. ಕಾರ್ಯಕ್ರಮ ಮುಗಿಸಿ ವಾಪಾಸ್ಸು ಊರಿಗೆ ಬರುತ್ತಿದ್ದ ವೇಳೆ ದಾವಣಗೆರೆಯಲ್ಲಿ ಸೋಮವಾರ ನಸುಕಿನ ವೇಳೆ ಸುಮಾರು 3 ಗಂಟೆಗೆ ಕಂಟೈನರ್ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಅಶೋಕ್ ಶೆಟ್ಟಿ (58) ಹಾಗೂ ಪುತ್ರ ಪನ್ನಗ (24)
ಗಂಭೀರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿಂಬದಿ ಕುಳಿತಿದ್ದ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಶೋಕ್ ಕುಮಾರ್ ಶೆಟ್ಟಿಯವರು ಕುಂದಾಪುರ ಭಾಗದ ಹಿರಿಯ ಛಾಯಾಚಿತ್ರಗಾರರಾಗಿದ್ದು ವಿವಿಧ ಸಂಘ -ಸಂಸ್ಥೆಗಳ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕುಂದಾಪುರ ತಾಲೂಕು ಛಾಯಾಗ್ರಾಹಕರ ಸಂಘ ದ ಮಾಜಿ ಅಧ್ಯಕ್ಷ ಹಾಗೂ ರಾಜ್ಯ ಛಾಯಾಗ್ರಾಹಕರ ಸಂಘಟನೆಯ ಹಾಲಿ ಸಂಚಾಲಕರಾಗಿದ್ದಾರೆ.