ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳ ಜೊತೆ ವ್ಯವಹರಿಸಲು ಗ್ರಾಮೀಣ ಭಾಗದ ಜನತೆಗೆ ಕಷ್ಟ ವಾಗುತ್ತಿದ್ದು, ಇದರಿಂದಾಗಿ ಬ್ಯಾಂಕ್ ಸಿಬ್ಬಂದಿಗಳು ಹಾಗೂ ಗ್ರಾಹಕರ ನಡುವೆ ಭಾಷಾ ಸಂವಹನದ ವಿಷಯದಲ್ಲಿ ಸಂಘರ್ಷಗಳು ಹೆಚ್ಚಾಗುತ್ತಿದೆ.ಆ ನಿಟ್ಟಿನಲ್ಲಿ ಬ್ಯಾಂಕ್ ಗಳಲ್ಲಿ ಪ್ರಾದೇಶಿಕ ಭಾಷೆಗೆ ಹೆಚ್ಚಿನ ಮಹತ್ವ ನೀಡಬೇಕೆಂದು ಡಾ.ಬಿ ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿ ಸುಶಾಂತ್ ಶೆಟ್ಟಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ನಿರ್ದೇಶಕರಾದ ಶ್ರೀ ಸತೀಶ ಮರಾಠೆ ಅವರಲ್ಲಿ ಮನವಿ ಮಾಡಿಕೊಂಡರು.
ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ನವೀಕೃತ ಉಚ್ಚಿಲ ಶಾಖೆಯ ಉದ್ಘಾಟನಾ ಸಮಾರಂಭ ಹಿನ್ನೆಲೆಯಲ್ಲಿ ಆಯೋಜಿಸಿದ್ದ “ಪ್ರಸಕ್ತ ಆರ್ಥಿಕತೆ ಹಾಗೂ ಬ್ಯಾಂಕುಗಳ ಪರಿಸ್ಥಿತಿ “ಎನ್ನುವ ವಿಷಯದ ಕುರಿತಾದ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಅರ್. ಬಿ. ಐ ನಿರ್ದೇಶಕರಲ್ಲಿ ವಿನಂತಿಸಿಕೊಂಡರು.
ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದರ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ಬೇರೆ ಬೇರೆ ಕ್ಷೇತ್ರದ ಪ್ರತಿನಿಧಿಗಳು, ಗಣ್ಯರು ಉಪಸ್ಥಿತರಿದ್ದರು.