ಕುಂದಾಪುರ (ಜು, 20) : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಜುಲೈ 2021 ರಂದು ಪ್ರಕಟಿಸಿರುವ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಸಿಎ ಮತ್ತು ಸಿಎಸ್ ಕೋರ್ಸುಗಳನ್ನು ಆಯ್ಕೆಮಾಡಿಕೊಳ್ಳಲು ಹಾದಿ ಸುಲಭವಾಗಿದೆ. ಸಿಎ ಮತ್ತು ಸಿಎಸ್ ಕೋರ್ಸುಗಳನ್ನು ಪೂರ್ಣಗೊಳಿಸುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಶ್ವದಾದ್ಯಂತ ಉಜ್ವಲ ಭವಿಷ್ಯವಿದೆ. ಈ ನಿಟ್ಟಿನಲ್ಲಿ ಕುಂದಾಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಆಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (SPACE) ಶಿಕ್ಷಣ ಸಂಸ್ಥೆಯು ಕಳೆದ ಹಲವು ವರ್ಷಗಳಿಂದ ಸಿಎ ಮತ್ತು ಸಿಎಸ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಿ ರಾಷ್ಟ್ರೀಯ ಮಟ್ಟದಲ್ಲಿ ಸಿಎ ಪರೀಕ್ಷೆಯಲ್ಲಿ ರ್ಯಾಂಕ್
ಪಡೆಯುವಲ್ಲಿ ಸಹಕಾರಿಯಾಗಿದೆ. ಸಂಸ್ಥೆಯಲ್ಲಿ ಸತತ ಎರಡು ಸಿಎಸ್ ಫೌಂಡೇಶನ್ ಬ್ಯಾಚುಗಳಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿರುವುದು ಕೂಡ ಸಂಸ್ಥೆಯ ಗುಣಮಟ್ಟಕ್ಕೆ ಹಿಡಿದಿರುವ ಕೈಗನ್ನಡಿಯಾಗಿದೆ.
ಉತ್ತಮ ಬೋಧಕರ ತಂಡ : ಶಿಕ್ಷ ಪ್ರಭಾ ಅಕಾಡೆಮಿಯ ಭೋಧಕರ ತಂಡ ಬಹಳ ಬಲಿಷ್ಟವಾಗಿದ್ದು ಹತ್ತಾರು ವರ್ಷಗಳ ಶೈಕ್ಷಣಿಕ ಅನುಭವವುಳ್ಳ ಭೋಧಕ ಸಿಬ್ಬಂದಿಗಳು ವಿದ್ಯಾರ್ಥಿಗಳ ಬೆಳವಣಿಗೆಗೆ ಸಹಕರಿಸುತ್ತಿದ್ದಾರೆ.
ಲೆಕ್ಕ ಪರಿಶೋಧಕರಾಗಿರುವ ಸಿಎ ದೀಪಿಕಾ ಪೈ, ಸಿಎ ರೋಯ್ ಅಲಾನ್ ಮಾತ್ಯಾಸ್, ಸಿಎ ಅರುಣ್ ನಾಯಕ್ ಜೊತೆಗೆ ಸಿಎಸ್ ವಿದ್ಯಾರ್ಥಿಗಳ ಸಂಪೂರ್ಣ ಜವಬ್ದಾರಿಯನ್ನು ಕಂಪೆನಿ ಸಕ್ರೇಟರಿ ಆಗಿರುವ ಸಿಎಸ್ ರಮ್ಯ ರಾವ್ ರವರು ಸೇರಿದಂತೆ ಗುಣಮಟ್ಟದ ಭೋಧಕ ಸಿಬ್ಬಂದಿಗಳ ಶೈಕ್ಷಣಿಕ ಅನುಭವ ವಿದ್ಯಾರ್ಥಿಗಳಿಗೆ ದೊರಕುತ್ತಿದೆ.
ವಿದ್ಯಾರ್ಥಿ ವೇತನದ ಜೊತೆಗೆ ಹಾಸ್ಟೆಲ್ ವ್ಯವಸ್ಥೆ :
ಶಿಕ್ಷ ಪ್ರಭಾ ಅಕಾಡೆಮಿಯು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗಾಗಿ ಪಾಂಡಿತ್ಯ ದರ್ಪಣ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು, ಸಿಎ/ಸಿಎಸ್ ಮಾಡುವ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆಯಬಹುದಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆಯನ್ನು ಕೂಡ ಒಳಗೊಂಡಿದೆ. ಜುಲೈ 26 ರಿಂದ ಹೊಸ ಬ್ಯಾಚ್ ಆರಂಭವಾಗಲಿದ್ದು, ಆಸಕ್ತ ವಿದ್ಯಾರ್ಥಿಗಳು ಕುಂದಾಪುರದ ಕುಂದೇಶ್ವರ ರಸ್ತೆಯಲ್ಲಿರುವ ಶಿಕ್ಷ ಪ್ರಭಾ ಆಕಾಡೆಮಿಯನ್ನು ಸಂಪರ್ಕಿಸಬಹುದು ಅಥವಾ www.shikshaprabha.com ಗೆ ಲಾಗಿನ್ ಮಾಡಬಹುದು ಎಂದು ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.