ಶಿರ್ವ(ಜು,22): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ವಿವಿಧ ಘಟಕಗಳಾದ ಗ್ರೀನ್ ಟೀಚರ್ ಫೋರಂ, ಎನ್ ಸಿಸಿ, ಎನ್ಎಸ್ ಎಸ್, ಯೂತ್ ರೆಡ್ ಕ್ರಾಸ್ ಮತ್ತು ರೋವರ್ಸ-ರೇಂಜರ್ಸ್ ಸಂಯುಕ್ತ ಆಶ್ರಯದಲ್ಲಿ ಹಸಿರಿನಿಂದ ಉಸಿರು – ವನಮಹೋತ್ಸವ ಕಾರ್ಯಕ್ರಮವನ್ನು ಕಾಲೇಜಿನ ಕ್ಯಾಂಪಸ್ ನಲ್ಲಿ ಫಲನೀಡುವ ಗಿಡಗಳನ್ನು ನೆಡುವ ಮೂಲಕ ಆಚರಿಸಲಾಯಿತು.
ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತಿ ವಂದನೀಯ ಧರ್ಮಗುರುಗಳಾದ ಡೆನ್ನಿಸ್ ಅಲೆಕ್ಸಾಂಡರ್ ಡೇಸ್ ರವರು ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ” ಎಲ್ಲರೂ ನಮ್ಮ ಕರ್ತವ್ಯ ಪಾಲನೆ ಮಾಡೋಣ ಎಂದು ಹೇಳಿದರು. ಇಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರನ್ನೂ ಶ್ಲಾಘಿಸಿ ಪ್ರಶಂಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ಭೋಧಕ ಹಾಗೂ ಭೋಧಕೇತರ ಸಿಬ್ಬಂದಿಗಳಿಗೆ ಪರಿಸರ ಕಾಳಜಿ ಮತ್ತು ಅದರ ಪ್ರಾಮುಖ್ಯತೆ ತಿಳಿಸುವ ಪ್ರತಿಜ್ಞಾ ಸ್ವೀಕಾರವನ್ನು ನೆರವೇರಿಸಿಕೊಟ್ಟರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಾಮಾಭಿವೃದ್ಧಿ ನಿರ್ದೇಶಕಿ ಮತ್ತು ಗ್ರೀನ್ ಟೀಚರ್ ಫೋರಂ ನ ಸಂಯೋಜಕಿ ಯಶೋಧಾ ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ತಿಳಿಸಿ ಸರ್ವರನ್ನು ಸ್ವಾಗತಿಸಿದರು.
ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್, ಎನ್ಎಸ್ ಎಸ್ ಅಧಿಕಾರಿ ರಕ್ಷಾ, ರೇಂಜರ್ಸ್ ಲೀಡರ್ ಶ್ರೀಮತಿ ಸಂಗೀತಾ ಪೂಜಾರಿ, ರೆಡ್ಕ್ರಾಸ್ ಘಟಕದ ಶ್ರೀಮುರಳಿ ಹಾಗೂ ಕಾಲೇಜಿನ ಎಲ್ಲಾ ಭೋಧಕ ಹಾಗೂ ಭೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಎನ್ ಎಸ್ಎಸ್ಎಸ್ ಅಧಿಕಾರಿ ಶ್ರೀ ಪ್ರೇಮನಾಥ ವಂದಿಸಿ, ರೋವರ್ಸ್ ಸ್ಕೌಟ್ ಲೀಡರ್ ಶ್ರೀ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.