ನಾವುಂದ ( ಜು, 31) : ಪ್ರತಿ ವರುಷ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿಗೆ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ 1995-96ನೇ ಸಾಲಿನ ವಿದ್ಯಾರ್ಥಿಗಳ ವತಿಯಿಂದ ನೀಡಲ್ಪಡುವ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನವನ್ನು ಇತ್ತೀಚೆಗೆ ವಿತರಿಸಲಾಯಿತು. ಈ ವರುಷ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದ ವಿಭಾಗದ ವಿದ್ಯಾರ್ಥಿ ಚವೀಶ್ ಜೈನ್ ಅವರಿಗೆ ಈ ಪ್ರೋತ್ಸಾಹಧನವನ್ನು ನೀಡಲಾಯಿತು.
ಆನ್ಲೈನ್ ಮೂಲಕ ನಡೆದ ಈ ಕಾರ್ಯಕ್ರಮದಲ್ಲಿ 1995-96ನೇ ಸಾಲಿನ ಕಾಲೇಜಿನ ವಿದ್ಯಾರ್ಥಿಗಳಾದ ವಿನಾಯಕ ಹೆಬ್ಬಾರ್, ಡಾ. ರಾಘವೇಂದ್ರ ಶೆಟ್ಟಿ, ರೇಖಾ ಶೆಟ್ಟಿ, ಕೃಷ್ಣಮೂರ್ತಿ ಉಪಸ್ಥಿತರಿದ್ದು ಕಾಲೇಜಿನ ದಿನಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ವಿದ್ಯಾರ್ಥಿಗೆ ಶುಭಕೋರಿದರು. ಕಾಲೇಜಿನ ಪ್ರಾಂಶುಪಾಲ ಅರುಣ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್ ಕಾರ್ಯಕ್ರಮ ನಿರೂಪಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ಸುಮಿತ್ರ ವಂದಿಸಿದರು. ಪ್ರಸಕ್ತ ಸಾಲಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.