ಬೆಂಗಳೂರು ( ಆ,4) : ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸಚಿವ ಸಂಪುಟಕ್ಕೆ ಕರಾವಳಿಯ ಮೂವರು ಆಯ್ಕೆಯಾಗಿದ್ದು, ಹಾಲಾಡಿ ಶ್ರೀನಿವಾಸ್ ಶೆಟ್ಟಿ ಸಚಿವ ಸ್ಥಾನದ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ಹಿಂದೆ ಮಂತ್ರಿಯಾಗಿದ್ದ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಮೊದಲ ಬಾರಿಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಹಾಗೂ ಸುಳ್ಯದ ಶಾಸಕ, ಮಾಜಿ ಸಚಿವ ಶ್ರೀ ಅಂಗಾರ ರವರಿಗೆ ಸಚಿವ ಸ್ಥಾನ ಪಕ್ಕಾ ಆಗಿದೆ. ಹಾಲಾಡಿ ಶ್ರೀನಿವಾಸ ಶೆಟ್ಟಿ ಯವರನ್ನು ಸಚಿವ ಸ್ಥಾನದ ಪಟ್ಟಿಯಿಂದ ಕೈಬಿಟ್ಟಿರುವುದು ಕುಂದಾಪುರ ಭಾಗದ ಜನತೆಗೆ ನಿರಾಸೆ ಉಂಟು ಮಾಡಿದೆ.