ಕುಂದಾಪುರ (ಆ, 5) : ಕುಂದಗನ್ನಡ ನಾಡು-ನುಡಿ, ಸಂಸ್ಕೃತಿಯ ಕುರಿತಾಗಿ ಯುವಜನತೆಯಲ್ಲಿ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಕುಂದಗನ್ನಡ ಭಾಗದ ಜನತೆ ಆಚರಿಸುವ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಕುಂದಾಪುರದ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಗಸ್ಟ್ 09 ರಂದು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕುಂದಾಪ್ರ ಕನ್ನಡದ ರಾಯಭಾರಿ, ಸಾಂಸ್ಕೃತಿಕ ಚಿಂತಕ ಹಾಗೂ ಶಿಕ್ಷಕರಾದ ಶ್ರೀ ಮನು ಹಂದಾಡಿಯವರು ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಯವರು ವಹಿಸಿಕೊಳ್ಳಲಿದ್ದಾರೆ.

ಹಾಗೆಯೇ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಂದವಾಹಿನಿ ಅಂತರ್ಜಾಲ ಸುದ್ದಿ ತಾಣದ ಜಂಟಿ ಆಶ್ರಯದಲ್ಲಿ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳು ವಿದ್ಯಾರ್ಥಿಗಳಿಗೆ ಆಯೋಜಿಸಿದ ಕುಂದಗನ್ನಡ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ಈ ಸಂದರ್ಭದಲ್ಲಿ ವಿತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.










