ತ್ರಾಸಿ (ಆ, 10) : ಇಲ್ಲಿನ ಡಾನ್ ಬಾಸ್ಕೋ ಸೀನಿಯರ್ ಸೆಕೆಂಡರಿ ಶಾಲೆಯ ವೆಲ್ಫೇರ್ ವಿಭಾಗದ ಆಶ್ರಯದಲ್ಲಿ ಇತ್ತೀಚೆಗೆ ವರ್ಚುವಲ್ ಮೋಡ್ನಲ್ಲಿ ಸೆಕೆಂಡರಿ ಮತ್ತು ಸೀನಿಯರ್ ಸೆಕೆಂಡರಿ ವಿಭಾಗದ ವಿದ್ಯಾರ್ಥಿಗಳಿಗೆ ಸೈಬರ್ ಸೆಕ್ಯೂರಿಟಿ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಡೆಸಿತು.
ಉಡುಪಿಯ ಪೃಥ್ವಿಷನ್ ಸಂಸ್ಥೆಯ ಸ್ಥಾಪಕರು ಹಾಗೂ ಸೈಬರ್ ಸೆಕ್ಯೂರಿಟಿ ಕ್ಷೇತ್ರದಲ್ಲಿ ಪರಿಣಿತರಾಗಿರುವ ಶ್ರೀ ಪೃಥ್ವೀಶ್ ಕೆ, ಕಾರ್ಯಕ್ರಮದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಸೈಬರ್ ಭದ್ರತೆಗೆ ಸಂಬಂಧಿಸಿದ ಪ್ರಸ್ತುತ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾ ಅವರು ನಿಜ ಜೀವನದ ಉದಾಹರಣೆಗಳೊಂದಿಗೆ ಮಕ್ಕಳ ಮೇಲಿನ ಪೋಷಕರ ನಿಯಂತ್ರಣದ ಬಗ್ಗೆ ವಿಚಾರವನ್ನು ಹಂಚಿಕೊಂಡರು.
ಸೈಬರ್ ಅಪರಾಧಿಗಳು ವರ್ಚುವಲ್ ಮೋಡ್ ಮೂಲಕ ಜನರ ಮೇಲೆ ದಾಳಿ ಮಾಡುವ ಮಾರ್ಗವನ್ನು ಕಂಡುಕೊಂಡಿದ್ದಾರೆ. ಗ್ಯಾಜೆಟ್ಗಳನ್ನು ಬಳಸುವ ನಾವೆಲ್ಲರೂ ಸಂಭವನೀಯ ಪರಿಣಾಮಗಳ ಬಗ್ಗೆ ತಿಳಿದಿರಬೇಕು ಮತ್ತು ನಮ್ಮನ್ನು ರಕ್ಷಿಸಿಕೊಳ್ಳಲು ಜ್ಞಾನವನ್ನು ಹೊಂದಿರುವುದು ಬಹಳ ಮುಖ್ಯ. ಹಾಗೆಯೇ
ಹಣದ ಹಗರಣ, ವಂಚನೆ ಕೊಂಡಿಗಳು, ಗೇಮಿಂಗ್, ಸಾಮಾಜಿಕ ಮಾಧ್ಯಮಗಳ ಪ್ರಸ್ತುತ ಟ್ರೆಂಡಿಂಗ್ ಸಮಸ್ಯೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಪ್ರದರ್ಶನಗಳ ಮೂಲಕ ತಿಳಿಸಿದರು.
ನಮ್ಮ ಮಕ್ಕಳ ಜೀವನದ ಬಹುಪಾಲು, ವಿಶೇಷವಾಗಿ ಹದಿಹರೆಯದವರು ಮತ್ತು ಅವರ ವಾಸ್ತವ ಜೀವನವನ್ನು ಸುರಕ್ಷಿತವಾಗಿರಿಸುವಲ್ಲಿ ಪೋಷಕರ ಪಾತ್ರ ಮಹತ್ವದ್ದು ಎಂದು ಹೇಳಿದರು. ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಪ್ರಾಂಶುಪಾಲರಾದ ಫಾ. ಮ್ಯಾಕ್ಸಿಮ್ ಡಿಸೋಜ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಅಧಿವೇಶನವನ್ನು ಮುಕ್ತಾಯಗೊಳಿಸಿದರು.
ಈ ಕಾರ್ಯಕ್ರಮವನ್ನು ಶಾಲೆಯ ವೆಲ್ಫೇರ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ರಕ್ಷಿತಾ ಎನ್ ಜೆ ಯವರ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿದ್ದು, ಸಿನೀಯರ್ ಸೆಕೆಂಡರಿ ಶಾಲೆಗೆ ಸೇರಿದ ‘ಕ್ಲಬ್ ಆಫ್ ಲೈಫ್’ ನ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಸಹಾಯ ಮಾಡಿದರು. 2 ಗಂಟೆಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಸುಮಾರು 60 ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು.