ಅಂಪಾರು(ಆ,11): ಕಳೆದ ಆರೇಳು ದಶಕಗಳಿಂದ ಅಂಪಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಡುಬಿಯರ್ ಜಡ್ಡು ಎಂಬಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಆರು ಕುಟುಂಬಗಳು ವಾಸವಾಗಿದ್ದಾರೆ. ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗ ಎಂಬ ಕಾರಣಕ್ಕೆ ಅವರಿಗೆ ಯಾವುದೇ ಹಕ್ಕು ಪತ್ರ ಇರಲಿಲ್ಲ. ಆ ಸ್ಥಳಕ್ಕೆ ಬೈಂದೂರು ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿಯವರು, ಸಹಾಯಕ ಕಮಿಷನರ್ ರಾಜು, ತಹಶೀಲ್ದಾರ್ ಕಿರಣ್ ಗೋರಯ್ಯ, ಕಂದಾಯ ನಿರೀಕ್ಷಕ ರಾಘವೇಂದ್ರ ಹಾಗೂ ಸ್ಥಳಿಯ ಮುಖಂಡರೊಂದಿಗೆ ಭೇಟಿ ನೀಡಿದರು.
ಬಡ ಕುಟುಂಬಗಳಿಗೆ ಹಕ್ಕುಪತ್ರ ಕಲ್ಪಿಸುವ ಕುರಿತು ಚರ್ಚಿಸಿದರು. ಈ ಬಗ್ಗೆ ಅರಣ್ಯ ಸಚಿವರೊಂದಿಗೆ ಮಾತುಕತೆ ಮಾಡುವುದಾಗಿ ತಿಳಿಸಿದರು. ಒಂದು ವೇಳೆ ಕಾನೂನು ತೊಡುಕು ಉಂಟಾದರೆ, ಬೇರೆ ಜಾಗವನ್ನು ನೀಡುವ ಸಂಪೂರ್ಣ ಭರವಸೆಯನ್ನು ಶಾಸಕರು ನೀಡಿದರು.