ಕುಂದಾಪುರ (ಆ, 10) : ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಸೃಜನ್ ಭಟ್ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ.
ಆಯಾಯ ದಿನದ ಪಾಠವನ್ನು ಆಂದೇ ಕಲಿತು ಮುಗಿಸುತ್ತಿದ್ದಿದ್ದರಿಂದ ಹೆಚ್ಚು ಒತ್ತಡದಿಲ್ಲದೆ ಪರೀಕ್ಷೆ ಬರೆಯಲು ಸಾಧ್ಯವಾಯಿತು. ಶಿಕ್ಷಕರು ಹಾಗೂ ತಂದೆ-ತಾಯಿಯ ಸಹಕಾರ ಮರೆಯಲಾಗದ್ದು ಎಂದು ಸೃಜನ್ ಅನುಭವವನ್ನು ಹಂಚಿಕೊಂಡಿದ್ದಾರೆ. ಕುಂದಾಪುರ ತಾಲೂಕು ವಡೇರ್ಹೋಬಳಿಯ ನಿವಾಸಿಗಳು ಹಾಗೂ ಎಚ್. ಆರ್. ಎಸ್ ಸರಕಾರಿ ಪದವಿಪೂರ್ವ ಕಾಲೇಜು ಹಾಲಾಡಿಯ ಪ್ರಾಂಶುಪಾಲರಾದ ಶ್ರೀಯುತ ಬಾಲಕೃಷ್ಣ ಭಟ್.ಕೆ ಹಾಗೂ ಸರಕಾರಿ ಪ್ರೌಢಶಾಲೆ ವಕ್ವಾಡಿಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಮತಿ ಪದ್ಮಲತಾ ಎನ್. ಇವರ ಪುತ್ರನಾಗಿರುವ ಸೃಜನ್ ‘ವೈದ್ಯನಾಗಿ ಕಡಿಮೆ ವೆಚ್ಚದಲ್ಲಿ ಬಡ ಜನರಿಗೆ ವೈದ್ಯಕೀಯ ಸೌಲಭ್ಯ ನೀಡಬೇಕೆನ್ನುವುದು ಆಸೆ ಹೊಂದಿದ್ದಾನೆ.
ಹೆಮ್ಮೆಯ ಸಾಧಕ ವಿದ್ಯಾರ್ಥಿ ಸೃಜನ್ ಭಟ್ ಸಾಧನೆಗೆ ಸಂಸ್ಥೆಯ ಸಂಚಾಲಕರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿ , ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಭೋಧಕ ಹಾಗೂ ಭೋಧಕೇತರ ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.