ಬೆಂಗಳೂರು (ಆ,18): ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಪಟ್ಟಿದ್ದ ಕುಂದಾಪುರ ಮೂಲದ ಹರೀಶ್ ಬಂಗೇರ ಬೆಂಗಳೂರು ಏರ್ಪೋರ್ಟ್ ತಲುಪಿದ್ದಾರೆ. ಸೌದಿ ದೊರೆಯ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರೆಂದು ಆರೋಪ ಎದುರಿಸಿರುವ ಹರೀಶ್ ನಿರಪರಾಧಿ ಎಂದು ತಿಳಿದ ಮೇಲೆ ಸೌದಿ ಅರೇಬಿಯಾ ಸರಕಾರ ಇವರನ್ನು ಬಿಡುಗಡೆಗೊಳಿಸಿದ್ದು,ಇದೀಗ ಕುಂದಾಪುರ ಪರಿಸರದ ಜನತೆಗೆ ಸಂತೋಷ ತಂದಿದೆ.
ಬೆಂಗಳೂರಿಗೆ ಆಗಮಿಸಿದ ಹರೀಶ್ ಬಂಗೇರರನ್ನು ಲೋಕೇಶ್ ಅಂಕದಕಟ್ಟೆ ಮತ್ತು ತಂಡ ಬೆಂಗಳೂರಿನ ಏರ್ಪೋರ್ಟ್ನಲ್ಲಿ ಬರಮಾಡಿಕೊಂಡರು.












