ಕೋಟೇಶ್ವರ (ಆ ,18): ಇಲ್ಲಿನ ಸುಣ್ಣಾರಿ ಎಕ್ಸಲೆಂಟ್ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕುಂದಾಪುರದ ಪ್ರಸಿದ್ಧ ಹೋಮಿಯೋಪತಿ ವೈದ್ಯರಾದ, ಡಾಕ್ಟರ್ ಉತ್ತಮ್ ಕುಮಾರ್ ಶೆಟ್ಟಿ ಧ್ವಜಾರೋಹಣ ಮಾಡಿ, ಸ್ವಾತಂತ್ರ್ಯ ಹೋರಾಟಗಾರರ ಹೋರಾಟದ ಬದುಕಿನ ಬಗ್ಗೆ ತಿಳಿಸಿದರು.
ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರು, ಕಾಲೇಜಿನ ಪ್ರಾಂಶುಪಾಲರಾದ ಡಾ.ಎಚ್ ರಮೇಶ್ ಶೆಟ್ಟಿ ಮಾತನಾಡಿ ನಮ್ಮ ಹಿರಿಯರು ತಂದುಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಇನ್ನೂರು ವರ್ಷ ಬ್ರಿಟಿಷರು ಭಾರತೀಯರನ್ನು ಗುಲಾಮರನ್ನಾಗಿ ನೋಡಿದರು. ದುರಂತ ಎಂದರೆ ಇಂದು ನಮ್ಮ ಸಾಮಾಜಿಕ ಜಾಲತಾಣಗಳಿಂದ ನಾವು ಬೌದ್ಧಿಕ ಗುಲಾಮರಾಗುತ್ತಿವೆ. ಯುವ ಜನತೆ ನಮ್ಮ ಸ್ವಂತಿಕೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕೆಂದು ಕರೆಕೊಟ್ಟರು.
ಎಂ. ಎಂ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆ ,ಶಿಕ್ಷಾ ಪ್ರಭಾ ಅಕಾಡೆಮಿ ಅಧ್ಯಕ್ಷರಾದ ಪ್ರತಾಪ್ ಚಂದ್ರ ಶೆಟ್ಟಿ ಹಾಗೂ ಸಂಸ್ಥೆಯ ಖಜಾಂಚಿ ಭರತ್ ಕುಮಾರ್ ಶೆಟ್ಟಿ, 75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ ಶುಭಕೋರಿದರು. ಉಪನ್ಯಾಸಕರಾದ ಪ್ರಕಾಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರು, ಮಕ್ಕಳು, ಪಾಲಕರು, ಸಿಬ್ಬಂದಿ ವರ್ಗ, 75ನೇ ಸ್ವತಂತ್ರ ದಿನಾಚರಣೆಯ ಸಂಭ್ರಮದ ಆಚರಣೆಯಲ್ಲಿ ಪಾಲ್ಗೊಂಡರು.