ಕುಂದಾಪುರ (ಆ,21): ಮಾಜಿ ಪ್ರಧಾನಿ ದಿವಂಗತ ಶ್ರೀ ರಾಜೀವ್ ಗಾಂಧಿಯವರ ಜನ್ಮ ದಿನವನ್ನು ಸದ್ಭಾವನಾ ದಿನವಾಗಿ ಆಗಸ್ಟ್,20ರಂದು ದೇಶದಲ್ಲೆಡೆ ಆಚರಿಸಲಾಗುತ್ತದೆ. ದೇಶದ ಜನರಲ್ಲಿ ಭಾಷೆ,ಧರ್ಮ ಪ್ರಾದೇಶಿಕತೆ ಕುರಿತಾಗಿ ಸದ್ಭಾವನೆ ಮೂಡಿಸಲು ಈ ಕಾರ್ಯಕ್ರಮ ಆಚರಿಸಲಾಗುತ್ತಿದ್ದು, ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ಸದ್ಭಾವನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಪ್ರತಿಜ್ಞೆಯನ್ನು ಸ್ವೀಕರಿಸುವ ಮೂಲಕ ಆಚರಿಸಲಾಯಿತು .
ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ.ಉಮೇಶ್ ಶೆಟ್ಟಿ ,ಉಪಪ್ರಾಂಶುಪಾಲರಾದ ಶ್ರೀ.ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಎನ್.ಎಸ್.ಎಸ್ ಘಟಕದ ಯೋಜನಾಧಿಕಾರಿ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಕಾರ್ಯಕ್ರಮ ನಿರೂಪಿಸಿದರು.
ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು,ಕಾಲೇಜಿನ ಎನ್.ಎಸ್.ಎಸ್ ಸ್ವಯಂಸೇವಕರು ಮತ್ತು ವಿವಿಧ ಘಟಕಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.