ಪುತ್ತೂರು(ಆ,22): ವಿದ್ಯಾರ್ಥಿಗಳು ಉತ್ತಮ ಉದ್ಯೋಗವನ್ನು ಪಡೆಯಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ತಮ್ಮ ಆಂತರಿಕ ಶೈಕ್ಷ ಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬೇಕಾದದು ಇಂದು ಅನಿವಾರ್ಯವಾಗಿದೆ. ಇದಕ್ಕೆ ವಿದ್ಯಾರ್ಥಿಗಳು ಪೂರ್ವ ತಯಾರಿಯನ್ನು ಮಾಡುವುದರ ಜೊತೆಗೆ, ಸರಿಯಾದ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನವನ್ನು ಪಡೆದು, ನಿರ್ದಿಷ್ಟ ಗುರಿಯನ್ನು ತಲುಪಬೇಕೇಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಲೆಫ್ಟಿನೆಂಟ್ ಶ್ರೀ ಕೆ ಪ್ರವೀಣ್ ಕುಮಾರ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜಿನ ಗಣಕವಿಜ್ಞಾನ ವಿಭಾಗ ಮತ್ತು ಐಟಿ ಕ್ಲಬ್ನ ಜಂಟಿ ಸಹಯೋಗದಲ್ಲಿ ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ, ಬಿಸಿಎ ವಿದ್ಯಾರ್ಥಿಗಳಿಗೆ ದೊರಕಬಹುದಾದ ಉದ್ಯೋಗಗಳು ಮತ್ತು ಅವಕಾಶಗಳ ಬಗ್ಗೆ ಒಂದು ದಿನದ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಶ್ರೀ ಪ್ರಕಾಶ್ಕುಮಾರ್, ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕ ವಿಕ್ರಾಂತ್ ಕೆ ಕಾರ್ಯಕ್ರಮ ನಿರೂಪಿಸಿದರು.