ವಂಡ್ಸೆ (ಆ, 23) : ಡಿಸಿ ಮನ್ನಾ ಭೂಮಿಯನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವಂತೆ ಬೈಂದೂರು ಮಂಡಲ ಬಿ.ಜೆ.ಪಿ ಎಸ್ಸಿ ಮೊರ್ಚಾದ ಸದಸ್ಯರು ಕ್ಷೇತ್ರದ ಶಾಸಕರಾದ ಬಿ ಎಂ ಸುಕುಮಾರ ಶೆಟ್ಟಿಯವರಿಗೆ ಆಗಸ್ಟ್,22 ರಂದು ಶಾಸಕರ ನಿವಾಸಕ್ಕೆ ತೆರಳಿ ಮನವಿ ನೀಡಿದರು. ಈ ಸಂದರ್ಭದಲ್ಲಿ ಎಸ್ಸಿ ಮೋರ್ಚಾ ಮಂಡಲ ಅಧ್ಯಕ್ಷರಾದ ಚಂದ್ರ ಪಂಚವಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಮೂಡುಬಗೆ, ನಿಕಟಪೂರ್ವ ತಾಲೂಕು ಪಂಚಾಯಿತಿ ಸದಸ್ಯ ನಾರಾಯಣ ಕೆ. ಗುಜ್ಜಾಡಿ ಹಾಗೂ ಎಸ್ಸಿ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಸಕರು ಶೀಘ್ರದಲ್ಲಿಯೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಭೂಮಿಯನ್ನು ಅರ್ಹರಿಗೆ ಹಂಚಿಕೆ ಮಾಡುವ ಬಗ್ಗೆ ಭರವಸೆ ನೀಡಿದರು.












