ಬೈಂದೂರು (ಸೆ, 9): ಜಿಲ್ಲಾ ವಿಕಲಚೇತನರ ಇಲಾಖೆ ಹಾಗೂ ಎಪಿಡಿ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ಕುಂದಾಪುರ ತಾಲೂಕು ಹಾಗೂ ಬೈಂದೂರು ತಾಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಹಾಗೂ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಸಭಾಂಗಣದಲ್ಲಿ ಆಯೋಜಿಸಿದ್ದ ಒಂದು ತಿಂಗಳ ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಸಪ್ಟೆಂಬರ್,9 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಿನ ಪಶು ವೈದ್ಯಾಧಿಕಾರಿಗಳಾದ ಶ್ರೀ ಸೂರ್ಯನಾರಾಯಣ ಉಪಾಧ್ಯಾಯ ವಹಿಸಿದ್ದರು, ಎಪಿಡಿ ಸಂಸ್ಥೆಯ ಜಿಲ್ಲಾ ನೋಡಲ್ ಅಧಿಕಾರಿಗಳಾದ ಶ್ರೀ ಹರೀಶ್ ಶೆಟ್ಟಿಯವರು ಮಾತನಾಡಿ, ವಿಶೇಷ ಚೇತನರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿದ್ದಾರೆ, ನಮ್ಮ ಸಂಸ್ಥೆಯೂ 1959 ರಲ್ಲಿ ಸ್ಥಾಪನೆಯಾಗಿದ್ದು, ಸುಮಾರು 62 ವರ್ಷಗಳಿಂದ ಅತ್ಯಂತ ಹಿಂದುಳಿದ ಗ್ರಾಮೀಣ ಮಟ್ಟದಲ್ಲಿ ಯುವ ವಿಶೇಷ ಚೇತನರನ್ನು ಗುರುತಿಸಿ ಅವರ ಸ್ವಾವಲಂಬಿ ಜೀವನಕ್ಕೆ ಸಹಕಾರಿಯಾಗಿದೆ ಎಂದು ಹೇಳಿದರು.
ಹಾಗೆಯೇ ಕೋರನಾ ಸಂದರ್ಭದಲ್ಲಿ ವಿಶೇಷ ಚೇತನರಿಗಾಗಿ ಗ್ರಾಮೀಣ ಮಟ್ಟದಲ್ಲಿ ಲಸಿಕೆ, ವೈದ್ಯಕೀಯ ಸೌಲಭ್ಯ, ಸಾಂತ್ವನ ,ಧೈರ್ಯ ತುಂಬಿದ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ IndusInd bank ಹಾಗೂ ಎಪಿಡಿ ಸಂಸ್ಥೆ ಬೆಂಗಳೂರು ಸಹಯೋಗದಲ್ಲಿ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಎಂಡೋಸಲ್ಫಾನ್ ಪೀಡಿತರ ಪರವಾಗಿ ತಿಲೋತ್ತಮಾ ನಾಯ್ಕ್, ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಶ್ರೀ ಮಂಜುನಾಥ ಹೆಬ್ಬಾರ್,ಎಪಿಡಿ ಸಂಸ್ಥೆಯ ಪ್ರತಿನಿಧಿ ಆಕಾಶ್ ಶೆಟ್ಟಿ, ಶಿಬಿರಾರ್ಥಿಗಳು , ಪ್ರತಿಕಾ ಮಿತ್ರರು ಹಾಗೂ ತಾಲೂಕಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು VRW ಶ್ರೀ ರಾಜು ಜಡ್ಕಲ್ ನಿರೂಪಿಸಿದರು, MRW ಶ್ರೀ ಮಂಜುನಾಥ ಹೆಬ್ಬಾರವರು ಸ್ವಾಗತಿಸಿ, ಶ್ರೀ ಹರೀಶ ಶೆಟ್ಟಿ ವಂದಿಸಿದರು.