ಮಲ್ಪೆ (ಸೆ,11): ಕೆಪಿಸಿಸಿ ವತಿಯಿಂದ ರಾಜ್ಯದ ಪ್ರಮುಖ ಮೀನುಗಾರಿಕಾ ಬಂದರಾದ ಮಲ್ಪೆಯ ಮೀನುಗಾರರ ತುರ್ತು ಆರೋಗ್ಯ ಸೇವೆಗೆ ಆಂಬುಲೆನ್ಸ್ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು .
ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಮಲ್ಪೆಗೆ ಹಿಂದೊಮ್ಮೆ ಆಗಮಿಸಿದಾಗ ಮೀನುಗಾರ ಸಮುದಾಯದವರು ಆಂಬ್ಯುಲೆನ್ಸ್ನ ಬೇಡಿಕೆ ಇಟ್ಟಿದ್ದರು. ಅದರಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಭವನದ ಮುಂಭಾಗ ಆಂಬುಲೆನ್ಸ್ ನ ಕೀಯನ್ನು ಮಲ್ಪೆಯ ಸಮಾಜ ಸೇವಕ ,ಆಪತ್ಭಾಂಧವ ಈಶ್ವರ ಮಲ್ಪೆಯವರಿಗೆ ಹಸ್ತಾಂತರಿಸಿದರು.
ಈ ವೇಳೆ ಮಾತನಾಡಿದ ಪ್ರಮೋದ್ ಮಧ್ವರಾಜ್ ಮಲ್ಪೆ ಬಂದರಿನಲ್ಲಿ ಸಾವಿರಾರು ಮೀನುಗಾರರಿದ್ದಾರೆ, ಯಾರಾದರೂ ನೀರಿಗೆ ಬಿದ್ದಾಗ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲು ಅಂಬ್ಯುಲೆನ್ಸ್ ವ್ಯವಸ್ಥೆಗಳಿರಲಿಲ್ಲ. ಇದನ್ನು ಗಮನಿಸಿದ ಡಿ.ಕೆ ಶಿವಕುಮಾರ್ ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ಗಣೇಶ ಚತುರ್ಥಿ ದಿನವೇ ಆಂಬುಲೆನ್ಸ್ ಹಸ್ತಾಂತರ ಮಾಡಿದ್ದೇವೆ ಎಂದು ಹೇಳಿದರು.
ಕೆಪಿಸಿಸಿ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು,ಸತೀಶ್ ಅಮೀನ್ ಪಡುಕರೆ, ರಮೇಶ್ ಕಾಂಚನ್, ಯತೀಶ್ ಕರ್ಕೇರಾ, ಪ್ರಖ್ಯಾತ್ ಶೆಟ್ಟಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.